ಮಡಿಕೇರಿ, ಆ.೧೨: ಮಳೆ ಹಾನಿ ಸಂಬAಧ ೧೫ ದಿನದೊಳಗೆ ಪರಿಹಾರ ವಿತರಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ವೀಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

ಮಳೆಯಿಂದ ಮನೆ ಹಾಗೂ ಬೆಳೆ ಹಾನಿ ಸಂಬAಧಿಸಿದAತೆ ತ್ವರಿತವಾಗಿ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು. ಹಾಗೆಯೇ ಕಳೆದ ವರ್ಷ ಪ್ರಾಕೃತಿಕ ವಿಕೋಪದಿಂದ ಮನೆ ಹಾನಿ ಹಾಗೂ ಬೆಳೆ ನಷ್ಟವಾಗಿದ್ದಲ್ಲಿ ಪರಿಹಾರ ವಿತರಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ತಿಳಿಸಿದರು. ಮೂಲಭೂತ ಸೌಕರ್ಯ ಸಂಬAಧಿಸಿದAತೆ ರಸ್ತೆ, ಶಾಲೆ, ಅಂಗನವಾಡಿ ಹಾಗೂ ಸರ್ಕಾರಿ ಕಟ್ಟಡಗಳ ಹಾನಿ ಮತ್ತು ವಿದ್ಯುತ್ ಸಂಬAಧ ನಷ್ಟ ಉಂಟಾಗಿದ್ದಲ್ಲಿ ಮಾಹಿತಿ ಪಡೆದು ವರದಿ ನೀಡಬೇಕೆಂದು ನಿರ್ದೇಶನ ನೀಡಿದರು.

ಕಳೆದ ಬಾರಿ ಪ್ರಾಕೃತಿಕ ವಿಕೋಪದಿಂದ ಕಟ್ಟಡ ದುರಸ್ತಿ ಸಂಬAಧಿಸಿದAತೆ ಅನುಮೋದನೆ ಪಡೆದಿರುವುದಕ್ಕೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಪರಿಹಾರವನ್ನು ನಿಯಮಾನುಸಾರ ವಿತರಿಸಬೇಕು, ಬಡವರಿಗೆ ಹಾಗೂ ಕೃಷಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಗಮನ ಹರಿಸಬೇಕು ಎಂದು ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಬೆಳೆ ಹಾನಿ ಹಾಗೂ ಮನೆ ಹಾನಿ ಸಂಬAಧಿಸಿದAತೆ ಬಡವರಿಗೆ ಪರಿಹಾರ ವಿತರಿಸಬೇಕು. ಭಾಗಶಃ ಹಾನಿಗೆ ತಮ್ಮ ಹಂತದಲ್ಲಿಯೇ ಪರಿಹಾರ ವಿತರಿಸಲು ಅಗತ್ಯ ಕ್ರಮ ವಹಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು.

ಮನೆ ಹಾನಿ ಹಾಗೂ ಬೆಳೆ ಹಾನಿ ಪರಿಹಾರ ಸಂಬAಧ ದೂರುಗಳು ಕೇಳಿಬಾರದಂತೆ ಗಮನ ಹರಿಸಬೇಕು. ಪ್ರಸಕ್ತ ವರ್ಷದಲ್ಲಿ ರೂ.೯೦ ಕೋಟಿ ಮಳೆಯಿಂದ ಹಾನಿಯಾಗಿದೆ ಎಂದು ಮಾಹಿತಿ ನೀಡಲಾಗಿದ್ದು, ಇನ್ನೂ ಹಾನಿ ಆಗಿದ್ದಲ್ಲಿ ಮಾಹಿತಿ ಒದಗಿಸ ಬಹುದಾಗಿದೆ ಎಂದು ಹೇಳಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬನಾ ಎಂ.ಶೇಖ್ ಮಾತನಾಡಿ, ರೈತರು ಬೆಳೆ ಸಮೀಕ್ಷೆ ಮಾಡಲು ಅವಕಾಶ ನೀಡಬೇಕು. ಕೃಷಿ, ತೋಟಗಾರಿಕೆ, ಕಂದಾಯ ಅಧಿಕಾರಿಗಳು ಜಂಟಿಯಾಗಿ ಬೆಳೆ ಸಮೀಕ್ಷೆ ಕೈಗೊಳ್ಳಲು ಸಹಕರಿಸಬೇಕು. ಭತ್ತ ಬೆಳೆಗೆ ವಿಮೆ ಇದ್ದು, ನೋಂದಣೆಗೆ ಬಾಕಿ ಇರುವ ಕೃಷಿಕರು ವಿಮೆ ನೋಂದಣಿ ಮಾಡಿಸಿಕೊಳ್ಳಲು ಮಾಹಿತಿ ನೀಡಬೇಕು ಎಂದು ಕೋರಿದರು.

ಇದೇ ಸಂದರ್ಭದಲ್ಲಿ ಕೋವಿಡ್-೧೯ ನಿಯಂತ್ರಣ ಸಂಬAಧಿಸಿದAತೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಪ್ರದೇಶದ ಚೆಕ್ ಪೋಸ್ಟ್ಗಳಲ್ಲಿ ಕೋವಿಡ್ ಪರೀಕ್ಷೆ ಮಾಡಬೇಕು, ೭೨ ಗಂಟೆಗಳ ಅವಧಿಯ ಕೋವಿಡ್ ನೆಗೆಟಿವ್ ವರದಿ ಇರಬೇಕು, ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ೧೦ ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡುಬAದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಕಂಟೈನ್‌ಮೆAಟ್ ವಲಯಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಕೋವಿಡ್‌ನಿಂದ ಮೃತಪಟ್ಟ ಬಡವರಿಗೆ ೧ ಲಕ್ಷ ಪರಿಹಾರ ನೀಡಲು ಸರ್ಕಾರ ಪ್ರಕಟಿಸಿದೆ, ಆ ದಿಸೆಯಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬದವರಿಗೆ ವಿಳಂಬ ಮಾಡದೆ ಪರಿಹಾರ ವಿತರಿಸುವಂತೆ ಸೂಚಿಸಿದರು.

ತಹಶೀಲ್ದಾರರಾದ ಮಹೇಶ್, ಗೋವಿಂದ್ ರಾಜು, ಯೋಗಾನಂದ, ತೋಟಗಾರಿಕೆ ಉಪ ನಿರ್ದೇಶಕ ಎಚ್.ಶಶಿಧರ, ಪಶುಪಾಲನಾ ಉಪ ನಿರ್ದೇಶಕ ಸುರೇಶ್ ಭಟ್, ಕಾಫಿ ಮಂಡಳಿ ಉಪ ನಿರ್ದೇಶಕ ಶಿವಕುಮಾರ ಸ್ವಾಮಿ, ಲೋಕೋಪಯೋಗಿ ಇಲಾಖೆಯ ಎಇಇ ಶಿವರಾಮ್, ಪಿಎಂಜಿಎಸ್‌ವೈ ಎಂಜಿನಿಯರ್ ಪ್ರಭು, ಕಂದಾಯ ಇಲಾಖೆ ಶಿರಸ್ತೆದಾರ್ ಪ್ರವೀಣ್ ಕುಮಾರ್, ಪ್ರಕಾಶ್ ಇತರರು ಇದ್ದರು.