ಸುಂಟಿಕೊಪ್ಪ, ಆ. ೧೨: ಟೋಕಿಯೋ ಒಲಂಪಿಕ್ಸ್ನಲ್ಲಿ ಭಾರತ ಮಹಿಳಾ ಹಾಕಿ ತಂಡದ ಕೋಚ್ ಆಗಿ ದೇಶವನ್ನು ಪ್ರತಿನಿಧಿಸಿದ್ದ ಸುಂಟಿಕೊಪ್ಪ ಕಂಬಿಬಾಣೆಯ ಅಂಕಿತಾ ಸುರೇಶ್ ಅವರನ್ನು ಬೆಂಗಳೂರು ವಿಜಯನಗರದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಆಶೀರ್ವದಿಸಿದರು. ಈ ಸಂದರ್ಭ ಅಂಕಿತಾ ಅವರ ಪತಿ ಹೊನ್ನಂಪಾಡಿ ಸುರೇಶ್ ಕುಶಾಲಪ್ಪ ಹಾಗೂ ಇನ್ನಿತರರು ಇದ್ದರು.