ಮಡಿಕೇರಿ, ಆ. ೧೨: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ಹಾಗೂ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಅದರಂತೆ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಅರ್ಹ ಕ್ರೀಡಾಪಟುಗಳು ೨೦೨೦ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು, ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಈ ಕಚೇರಿಯಿಂದ ಪಡೆದು ತಾ. ೨೫ ರೊಳಗೆ ಪ್ರಸ್ತಾವನೆಯನ್ನು ಈ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ: ೦೮೨೭೨-೨೨೮೯೮೫ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.