ಮಡಿಕೇರಿ, ಆ. ೧೨: ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಜರುಗುವ ಮೊಹರಂ ಹಾಗೂ ಗಣೇಶೋತ್ಸವ ಆಚರಣೆ ಸಂಬAಧ ಕೋವಿಡ್ ಸೋಂಕು ನಿಯಂತ್ರಿಸುವ ಸಲುವಾಗಿ ಸರಕಾರ ಮಾರ್ಗಸೂಚಿಯನ್ನು ಹೊರಡಿಸಿದೆ.

ಮೊಹರಂ ಹಬ್ಬ

ಸಾರ್ವಜನಿಕ ಸ್ಥಳಗಳಲ್ಲಿ ಆಲಂಗಳನ್ನು / ಪಂಜಾವನ್ನು ಸ್ಥಾಪಿಸುವುದನ್ನು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ. ಮುಂದುವರೆದು, ದಿನಾಂಕ ೧೨.೮.೨೦೨೧ರಿಂದ ೨೦.೮.೨೦೨೧ರವರೆಗೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಮೊಹರಂ ಸಂಬAಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾದಿಗಳು ಸೂಕ್ತ ಸಾಮಾಜಿಕ ಅಂತರದೊAದಿಗೆ ಕನಿಷ್ಟ ಸಂಖ್ಯೆಯಲ್ಲಿ ಭಾಗವಹಿಸುವುದು.

ಪಂಜ, ಆಲಂ ಮತ್ತು ತಾಜಿಯತ್‌ಗಳನ್ನು ಸಾರ್ವಜನಿಕರು ಮುಟ್ಟದೆ ದೂರದಿಂದ ನೋಡತಕ್ಕದ್ದು.

ಖಬರಸ್ಥಾನ್ ಒಳಗೊಂಡAತೆ ಯಾವುದೇ ಖಾಲಿ ಜಾಗಗಳಲ್ಲಿ ಯಾವುದೇ ತರಹದ ಸಭೆ ಏರ್ಪಡಿಸುವುದನ್ನು ನಿರ್ಬಂಧಿಸಲಾಗಿದೆ. ಖಬರಸ್ಥಾನ್‌ಗಳಿಗೆ ಕೇವಲ ದಫನ ಮಾಡಲು ಮಾತ್ರ ಅನುಮತಿ ನೀಡಿದ್ದು, ಮೊಹರಂಗೆ ಸಂಬAಧಿಸಿದ ಆಚರಣೆಗಳಿಗೆ ಅನುಮತಿ ಇರುವುದಿಲ್ಲ. ಪ್ರಾರ್ಥನಾ ಸ್ಥಳಗಳಲ್ಲಿ ಮುಖ ಗವಸನ್ನು ಕಡ್ಡಾಯವಾಗಿ ಧರಿಸತಕ್ಕದ್ದು. ೬೦ ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ೧೦ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡತಕ್ಕದ್ದು.

ಕೋವಿಡ್ -೧೯ ಸಮುಚಿತ ವರ್ತನೆಗಳೊಂದಿಗೆ, ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸತಕ್ಕದ್ದು. ಒಂದು ವೇಳೆ ಹೆಚ್ಚು ಜನರು ಆಗಮಿಸಿದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸತಕ್ಕದ್ದು. ಕೋವಿಡ್ -೧೯ ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಟ ೬ ಅಡಿ ಅಂತರ ಕಾಯ್ದುಕೊಳ್ಳತಕ್ಕದ್ದು. ಆಗಾಗ ಕೈಗಳನ್ನು ಸೋಪು ಮತ್ತು ಸ್ಯಾನಿಟೈಸರ್‌ಗಳಿಂದ ಶುಚಿಗೊಳಿಸತಕ್ಕದ್ದು. ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡತಕ್ಕದ್ದು.

ಭಕ್ತಾದಿಗಳು ಪ್ರವೇಶಿಸುವ ದ್ವಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟುವುದು. ಆಡಳಿತ ಮಂಡಳಿ / ಮುತವಲ್ಲಿ/ ಆಡಳಿತಾಧಿಕಾರಿ ಇವರು ಭಕ್ತಾದಿಗಳು ಕುಳಿತುಕೊಳ್ಳುವ ಗರಿಷ್ಠ ಸಂಖ್ಯೆಯನ್ನು ಮುಖ್ಯ ದ್ವಾರದ ಬಳಿ ಪ್ರದರ್ಶಿಸುವುದು. ಮಸೀದಿಗಳಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನ್ನು (ಜಾಯನಮಾಜ್) ಕಡ್ಡಾಯವಾಗಿ ತರತಕ್ಕದ್ದು. ಪರಸ್ಪರ ಹಸ್ತಲಾಘವ ಮತ್ತು ಆಲಿಂಗನವನ್ನು ಮಾಡತಕ್ಕದ್ದಲ್ಲ.

ಮಸೀದಿಗಳನ್ನು ಹೊರತುಪಡಿಸಿ ಇತರ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಂದರೆ, ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜಿಸುವಂತಿಲ್ಲ. ಮೊಹರಂ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ / ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.

ಭಕ್ತಾದಿಗಳು ಯಾವ ಯಾವ ಕೆಲಸವನ್ನು ನಿರ್ವಹಿಸುವುದು / ಯಾವ ಯಾವ ಕೆಲಸವನ್ನು ನಿರ್ವಹಿಸಬಾರದು ಎಂಬ ಬಗ್ಗೆ ಧ್ವನಿ ವರ್ಧಕದ ಮೂಲಕ ಸೂಚಿಸುವುದು.

ಗಣೇಶೋತ್ಸವ

ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು. ಇದನ್ನು ಹೊರತುಪಡಿಸಿ, ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ / ಪೆಂಡಾಲ್ / ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ.

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ / ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಪಾರಂಪಾರಿಕ ಗೌರಿ - ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ / ಜಿಲ್ಲಾಡಳಿತ/ ಹತ್ತಿರದ ಸ್ಥಳೀಯ ಸಂಸ್ಥೆಗಳ / ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ, ಕಲ್ಯಾಣಿ ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸತಕ್ಕದ್ದು.

ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡತಕ್ಕದ್ದು. ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕಿçÃನಿಂಗ್ ವ್ಯವಸ್ಥೆಯನ್ನು ಕಲ್ಪಿಸತಕ್ಕದ್ದು. ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್ -೧೯ ಸಮುಚಿತ ವರ್ತನೆಯಂತೆ ಕಡ್ಡಾಯವಾಗಿ ಮುಖಗವಸನ್ನು ಧರಿಸುವುದು. ಕನಿಷ್ಟ ೬ ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು.

ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಿಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ / ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

ಕೋವಿಡ್ -೧೯ ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೆ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರ ಇಲಾಖೆಗಳಿಂದ ಹೊರಡಿಸಲಾದ ಸೂಚನೆಗಳು / ಮಾರ್ಗಸೂಚಿಗಳು / ಪ್ರಮಾಣಿತ ಕಾರ್ಯವಿಧಾನ (SಔP) ಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

ದಿನಾಂಕ ೬.೮.೨೦೨೧ ಮಾರ್ಗಸೂಚಿಯಲ್ಲಿ ಮನೋರಂಜನಾ / ಸಾಂಸ್ಕೃತಿಕ/ ಧಾರ್ಮಿಕ ಕಾರ್ಯಕ್ರಮಗಳು/ ಇತರ ಒಗ್ಗೂಡುವಿಕೆಗಳನ್ನು ಮತ್ತು ಬೃಹತ್ ಸಭೆ- ಸಮಾರಂಭಗಳನ್ನು ನಿಷೇಧಿಸಲಾಗಿದ್ದು, ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ ಮತ್ತು ಸಭೆ - ಸಮಾರಂಭಗಳಿಗೆ ಅನುಮತಿ ನೀಡಲಾಗಿರುವುದಿಲ್ಲ. ಮೇಲ್ಕಂಡ ಹಬ್ಬಗಳ ಸಂದರ್ಭದಲ್ಲಿ ಯಾವುದೇ ವಿಧದ ಮೆರವಣಿಗೆಯನ್ನು, ಜನರ ಒಗ್ಗೂಡುವಿಕೆಯನ್ನು ಮಾಡತಕ್ಕದ್ದಲ್ಲ.

ಹಬ್ಬ ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಮೊಹರಂ ಮತ್ತು ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವಂತೆ ಸರಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಮಾರ್ಗಸೂಚಿಯಲ್ಲಿ ಆದೇಶಿಸಿದ್ದಾರೆ.