ಬೆAಗಳೂರು, ಆ. ೧೪: ಕೇರಳ ರಾಜ್ಯದಲ್ಲಿ ಕೊರೊನಾ ಹಾವಳಿ ಮಿತಿ ಮೀರಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಎಲ್ಲಾ ಕೇರಳದ ಗಡಿಗಳಲ್ಲಿ ತಪಾಸಣೆಯನ್ನು ಈಗಾಗಲೇ ಬಿಗಿಗೊಳಿಸಲಾಗಿದ್ದು, ಅದು ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಕೋವಿಡ್ ನಿಯಂತ್ರಣ ಸಂಬAಧ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೇರಳ ಗಡಿಯಲ್ಲಿ ತಪಾಸಣೆ ಬಿಗಿಗೊಳಿಸಿರುವ ಬಗ್ಗೆ ಕೇರಳ ಸರ್ಕಾರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಅದನ್ನು ಕಾನೂನಾತ್ಮಕವಾಗಿ ಹೆದರಿಸಲಾಗುವುದು. ಕರ್ನಾಟಕ ಜನರ ಜೀವರಕ್ಷಣೆ ನಮ್ಮ ಜವಾಬ್ದಾರಿ ಎಂದು ಹೇಳಿದರು.

ತಜ್ಞರ ಜೊತೆಗೆ ಸುದೀರ್ಘವಾದ ಚರ್ಚೆಯಾಗಿದೆ. ನೆರೆಯ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟçದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಸ್ಥಿತಿಗತಿ ಸೇರಿದಂತೆ ಎಲ್ಲಾ ಅಂಶಗಳ ಬಗ್ಗೆ ವಿವರವಾದ ವರದಿ ನೀಡಿದ್ದಾರೆ. ಕೋವಿಡ್ ಎರಡನೇ ಹಂತ ಇನ್ನೂ ಪೂರ್ಣಗೊಂಡಿಲ್ಲ, ಹೀಗಾಗಿ ನಾವು ಮುಂಜಾಗ್ರತೆ ವಹಿಸಬೇಕಾಗಿದೆ. ಶಾಲೆಗಳ ಬಗ್ಗೆ ಚರ್ಚೆಯಾಗಿದೆ. ಕೋವಿಡ್ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯುವುದು ಬೇಡ, ಪಾಸಿಟಿವಿಟಿ ಶೇ. ೨ ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು. ಒಂದು ವೇಳೆ ಶಾಲೆ ಆರಂಭವಾದ ನಂತರ ಪಾಸಿಟಿವಿಟಿ ದರ ಶೇ. ೨ಕ್ಕಿಂತ ಹೆಚ್ಚಾದಲ್ಲಿ ಒಂದು ವಾರಗಳ ಕಾಲ ಶಾಲೆ ಮುಚ್ಚಿ, ಸ್ಯಾನಿಟೈಸ್ ಮಾಡಿದ ಒಂದು ವಾರದ ನಂತರ ಪುನರ್ ಆರಂಭಿಸಲು ತೀರ್ಮಾನಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರಿನಲ್ಲಿ ಪಾಸಿಟಿವಿಟಿ ದರ ಹೆಚ್ಚಾಗಿದ್ದು, ಪರೀಕ್ಷೆ, ಲಸಿಕೆ ಹೆಚ್ಚಾಗಬೇಕು.

ಮಹಾರಾಷ್ಟç ಮತ್ತು ಕೇರಳ ಗಡಿಯಲ್ಲಿನ ೧೦ ಕಿಲೋಮೀಟರ್ ಒಳಗಿನ ಹಳ್ಳಿಗಳಲ್ಲಿ ಪರೀಕ್ಷೆ ಪ್ರಮಾಣ ಹೆಚ್ಚಿಸಲು ಸೂಚಿಸಲಾಗಿದೆ ಎಂದು ಹೇಳಿದರು. ಸಂಭಾವ್ಯ ಮೂರನೇ ಅಲೆ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳ ಲಾಗಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ ಮತ್ತು ಬೆಳಗಾವಿ, ಹುಬ್ಬಳ್ಳಿಯಲ್ಲಿ ಮುಂದಿನ ಮೂರು ವಾರಗಳೊಳಗೆ ಜಿನೋಬ್ ಟೆಸ್ಟಿಂಗ್ ಲ್ಯಾಬ್ ಸ್ಥಾಪನೆ ಮಾಡಬೇಕೆಂದು ಸೂಚಿಸಲಾಗಿದೆ. ಮಕ್ಕಳ ಆರೈಕೆಗಾಗಿ ಆಸ್ಪತ್ರೆಗಳಲ್ಲಿ ಬೆಡ್, ಐಸಿಯು ವ್ಯವಸ್ಥೆ ಮಾಡಲು ಸೂಚಿಸಲಾ ಗಿದೆ. ಮುಂದಿನ ವಾರ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ, ಲಸಿಕೆ ಪೂರೈಕೆ ಪ್ರಮಾಣವನ್ನು ಹೆಚ್ಚಿಸುವಂತೆ ಮನವಿ ಮಾಡುವುದಾಗಿ ಮುಖ್ಯಮಂತ್ರಿ ತಿಳಿಸಿದರು.