ಮಡಿಕೇರಿ, ಆ. ೧೩: ರಾಜ್ಯದಲ್ಲಿನ ಕೋವಿಡ್ -೧೯ ಪರಿಸ್ಥಿತಿಯನ್ನು ಮತ್ತೊಮ್ಮೆ ಪರಿಶೀಲಿಸಲಾಗಿದ್ದು, ಕೇರಳ ರಾಜ್ಯಕ್ಕೆ ಹೊಂದಿಕೊAಡಿರುವ ಕರ್ನಾಟಕ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಹೊಸ ಕೋವಿಡ್ -೧೯ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಮನಿಸಲಾಗಿದೆ. ಕೋವಿಡ್ -೧೯ ವೈರಾಣು ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಕೇಂದ್ರೀಕೃತ ಕಣ್ಗಾವಲು, ಕೋವಿಡ್ -೧೯ ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಮತ್ತು ಸ್ಥಳೀಯವಾಗಿ ಹರಡುವಿಕೆಯನ್ನು ನಿಯಂತ್ರಿಸಲು ಇತರ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಅನುಸರಿಸು ವಂತೆ ಆರೋಗ್ಯ ಪರಿಣಿತರು ಸೂಚಿಸಿರುತ್ತಾರೆ.
ವಿಪತ್ತು ನಿರ್ವಹಣಾ ಅಧಿನಿಯಮ, ೨೦೦೫ರ ಪ್ರಕರಣ ೨೪ ರ ಅಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರ ನಿರ್ದೇಶನದಂತೆ, ದಿನಾಂಕ: ೦೩.೦೭.೨೦೨೧ರಲ್ಲಿ ಹೊರಡಿಸಲಾದ ಕಣ್ಗಾವಲು, ನಿಯಂತ್ರಣ ಮತ್ತು ಜಾಗರೂಕತೆ ಮಾರ್ಗಸೂಚಿಗಳನ್ನು ಮತ್ತು ಮಾರ್ಗಸೂಚಿಗಳಿಗೆ ಸಂಬAಧಿಸಿದAತೆ ರಾಜ್ಯಾದ್ಯಂತ ತಾ. ೩೦.೦೮.೨೦೨೧ರ ಬೆಳಿಗ್ಗೆ ೬ ಗಂಟೆಯವರೆಗೆ ಮುಂದುವರಿಸಲಾಗಿದೆ.
ಸುತ್ತೋಲೆಯನುಸಾರ ಕೇರಳ ಮತ್ತು ಮಹಾರಾಷ್ಟç ರಾಜ್ಯಗಳಿಗೆ ಹೊಂದಿಕೊAಡಿರುವ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಕಣ್ಗಾವಲು ಇರಿಸತಕ್ಕದ್ದು ಎಂದು ಸರಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶದಲ್ಲಿ ಸೂಚಿಸಿದ್ದಾರೆ.