ಸೋಮವಾರಪೇಟೆ, ಆ. ೧೩: ಕರ್ನಾಟಕ ಸರ್ಕಾರ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕದ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ತಾ. ೧೬ರಂದು ನಡೆಯಲಿದೆ.

ಸರ್ಕಾರದ ಆಶಯದಂತೆ ಶಾಲಾ ವಿದ್ಯಾರ್ಥಿನಿಯರಿಗೆ ಪೌಷ್ಠಿಕಾಂಶಯುಕ್ತ ಆಹಾರ ಕಿಟ್ ವಿತರಿಸಲಾಗುತ್ತಿದೆ. ಇಲ್ಲಿನ ಹಳೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಅಂದು ಬೆಳಿಗ್ಗೆ ೧೦ ಗಂಟೆಗೆ ಶಾಸಕ ಅಪ್ಪಚ್ಚು ರಂಜನ್ ಅವರು ಆಹಾರದ ಕಿಟ್ ವಿತರಿಸಲಿದ್ದಾರೆ ಎಂದು ವಸತಿ ಶಾಲೆಯ ಪ್ರಾಂಶುಪಾಲರಾದ ಲೋಕೇಶ್ ತಿಳಿಸಿದ್ದಾರೆ.