ಸೋಮವಾರಪೇಟೆ, ಆ. ೧೩: ಜಿಲ್ಲಾ ಯುನೈಟೆಡ್ ಪ್ಲಾಂಟೇಷನ್ ವಕರ್ಸ್ ಯೂನಿಯನ್ ವತಿಯಿಂದ ತಾ. ೧೬ ರಂದು ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಹೆಚ್.ಎಂ. ಸೋಮಪ್ಪ ತಿಳಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ನಿವೇಶನ ರಹಿತರು ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸುತ್ತಾ ಬಂದಿದ್ದರೂ, ಇಲ್ಲಿಯವರೆಗೆ ನಿವೇಶನ ರಹಿತರಿಗೆ ನಿವೇಶನ ನೀಡಿಲ್ಲ. ರೆವಿನ್ಯೂ ಇಲಾಖೆಯವರು ಹಾಗೂ ಸಂಬAಧಿಸಿದ ಇಲಾಖೆಗಳು ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುವುದು. ಅಂದು ಬೆಳಿಗ್ಗೆ ೧೧ಕ್ಕೆ ಮೆರವಣಿಗೆಯ ಮೂಲಕ ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯಿತಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಸೋಮಪ್ಪ ತಿಳಿಸಿದ್ದಾರೆ.