ಗೋಣಿಕೊಪ್ಪಲು, ಆ. ೧೩: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ರೈತರಿಗೆ ಅತ್ಯವಶ್ಯಕವಾಗಿ ಬೇಕಾಗಿರುವ ಪಹಣಿ ಪತ್ರ ಅಲಭ್ಯತೆ ಇದ್ದು ಈ ಬಗ್ಗೆ ಕಂದಾಯ ಸಚಿವರು ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ, ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪಹಣಿ ಅಲಭ್ಯದ ಬಗ್ಗೆ ‘ಶಕ್ತಿ' ಸಮಗ್ರ ವರದಿ ಪ್ರಕಟಿಸಿ ಜಿಲ್ಲಾಡಳಿತದ ಗಮನ ಸೆಳೆದಿತ್ತು.