ಮಡಿಕೇರಿ, ಆ. ೧೩: ಬೋಯಿಕೇರಿಯಲ್ಲಿ ಸೈನಿಕ ಕುಟುಂಬದ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬAಧಿಸಿದAತೆ ಕಾಂಗ್ರೆಸ್ ರಾಜಿ ಸಂಧಾನಕ್ಕೆ ಪ್ರಯತ್ನಿಸಿದೆ ಎಂದು ಜಿಲ್ಲಾಧ್ಯಕ್ಷ ತೀತೀರ ಧರ್ಮಜ ನೀಡಿರುವ ಹೇಳಿಕೆ ಶುದ್ಧ ಸುಳ್ಳು ಎಂದು ಯೋಧನ ಪತ್ನಿ ಯೋಗಿತಾ ಅಶೋಕ್ ಸ್ಪಷ್ಟಪಡಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತ ಮಡಿಕೇರಿ, ಆ. ೧೩: ಬೋಯಿಕೇರಿಯಲ್ಲಿ ಸೈನಿಕ ಕುಟುಂಬದ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬAಧಿಸಿದAತೆ ಕಾಂಗ್ರೆಸ್ ರಾಜಿ ಸಂಧಾನಕ್ಕೆ ಪ್ರಯತ್ನಿಸಿದೆ ಎಂದು ಜಿಲ್ಲಾಧ್ಯಕ್ಷ ತೀತೀರ ಧರ್ಮಜ ನೀಡಿರುವ ಹೇಳಿಕೆ ಶುದ್ಧ ಸುಳ್ಳು ಎಂದು ಯೋಧನ ಪತ್ನಿ ಯೋಗಿತಾ ಅಶೋಕ್ ಸ್ಪಷ್ಟಪಡಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತ ನಡೆಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ನೀಡಿರುವ ಹೇಳಿಕೆ ಶುದ್ಧ ಸುಳ್ಳು, ಯಾವುದೇ ಕಾರಣಕ್ಕೂ ತಮ್ಮ ಕುಟುಂಬ ರಾಜಿ ತೀರ್ಮಾನಕ್ಕೆ ಒಪ್ಪುವುದಿಲ್ಲ. ಕಾನೂನಾತ್ಮಕ ಹೋರಾಟ ಮುಂದುವರೆಸ ಲಾಗುವುದು. ಜನರನ್ನು ದಿಕ್ಕುತಪ್ಪಿಸುವ ಯತ್ನ ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದರು.

ಧರ್ಮಜ ಅವರು ಇದೊಂದು ಆಕಸ್ಮಿಕ ಘಟನೆ ಎನ್ನುತ್ತಾರೆ. ಅವರ ಕುಟುಂಬದ ಮೇಲೆ ಈ ರೀತಿ ಹಲ್ಲೆ ನಡೆದಿದ್ದರೆ ಸುಮ್ಮನೆ ಇರುತ್ತಿದ್ದರಾ? ಹೇಗೆ ಇದು ಆಕಸ್ಮಿಕ ಘಟನೆ ಆಗುತ್ತದೆ ಎಂದು ಪ್ರಶ್ನಿಸಿದ ಯೋಗಿತಾ, ರಾಜಕೀಯವಾಗಿ ಪ್ರಕರಣವನ್ನು ಬಳಸಿಕೊಳ್ಳಬೇಡಿ ಎಂದು ಮನವಿ ಮಾಡಿದರು.

ಚಿನ್ನಾಭರಣ ಕಳವು ಸಂಬAಧ ಸ್ಪಷ್ಟನೆ ನೀಡಿದ ಅವರು, ಗುಂಪು ಘರ್ಷಣೆ ವೇಳೆ ಪತಾಕ್, ಸರ, ಮಂಗಳಸೂತ್ರ ಸೇರಿದಂತೆ ಇನ್ನಿತರ ಆಭರಣಗಳು ಕಳುವಾಗಿವೆ. ಪತ್ರಿಕಾಗೋಷ್ಠಿಯಲ್ಲಿ ಹಲ್ಲೆ ಮಾಡಿದವರು ತಮಗೆ ಕಳ್ಳತನ ಮಾಡಿ ಬದುಕಬೇಕಾಗಿಲ್ಲ ಎಂದು ಹೇಳಿದ್ದಾರೆ. ಅವರಿಗೆ ಚಿನ್ನದ ಅವಶ್ಯಕತೆ ಇಲ್ಲದೆ ಇರಬಹುದು ಆದರೆ, ಗುಂಪಿನಲ್ಲಿದ್ದ ವರು ಈ ಕೃತ್ಯ ಎಸಗಿರಬಹುದು ಎಂದು ಹೇಳಿದ ಅವರು, ಇನ್ನೂ ೧೦ ದಿನಗಳಲ್ಲಿ ತನ್ನ ಪತಿ ಅಶೋಕ್ ಕರ್ತವ್ಯಕ್ಕೆ ಹಿಂತಿರು ಗುತ್ತಿದ್ದು, ಕುಟುಂಬಕ್ಕೆ ಸೂಕ್ತ ರಕ್ಷಣೆ ಬೇಕೆಂದು ಆಗ್ರಹಿಸಿದರು.

ಮಾಜಿ ಸೈನಿಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಸುಧೀರ್ ಮಾತನಾಡಿ, ಹಲ್ಲೆ ಮಾಡಿದವರ ವಿರುದ್ಧ ೩೦೭ರ ಸೆಕ್ಷನ್ ಅಡಿ ಪ್ರಕರಣ ದಾಖಲಿಸಬೇಕು. ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗಬೇಕು. ಪೊಲೀಸ್ ಇಲಾಖೆ ರೌಡಿಶೀಟರ್ ತೆರೆಯುವ ಬಗ್ಗೆ ಭರವಸೆ ನೀಡಿದ್ದಾರೆ. ಆದರೆ, ಇನ್ನೂ ಆಗಿಲ್ಲ. ಈ ಬಗ್ಗೆ ಇಲಾಖೆ ಕ್ರಮವಹಿಸಬೇಕೆಂದು ಆಗ್ರಹಿಸಿದರು.

ಸಂಘಟನಾ ಕಾರ್ಯದರ್ಶಿ ಕೆ.ಬಿ. ಕವನ್ ಮಾತನಾಡಿ, ಕಾಂಗ್ರೆಸ್ ಇಲ್ಲಸಲ್ಲದ ಹೇಳಿಕೆ ನೀಡಿ ಸಮಾಜವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಇದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗೋಷ್ಠಿಯಲ್ಲಿ ಹಲ್ಲೆಗೊಳಗಾದ ಯೋಧ ಅಶೋಕ್, ಯೋಧನ ಸಹೋದರ ಚೇತನ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕೆ.ಪಿ. ಸೋಮಣ್ಣ ಇದ್ದರು.