ಮಡಿಕೇರಿ, ಆ. ೧೩: ಸಾಮಾನ್ಯ ಕೆಮ್ಮು, ನೆಗಡಿ, ಜ್ವರ ಮತ್ತು ಇತರ ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲಿಯೇ ಕುಳಿತು ವೈದ್ಯರಿಂದ ಚಿಕಿತ್ಸೆ ಪಡೆಯಲು ಇ-ಸಂಜೀವಿನಿ ಆ್ಯಪ್ ಬಳಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ತಿಳಿಸಿದ್ದಾರೆ.
ವೈದ್ಯರನ್ನು ಮೊಬೈಲ್‌ನಲ್ಲಿ ಸಂಪರ್ಕಿಸಲು ಮೊಬೈಲ್‌ನ ಪ್ಲೇಸ್ಟೋರ್‌ನಲ್ಲಿ ಇ-ಸಂಜೀವಿನಿ ಒಪಿಡಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು ಅಥವಾ ಗೂಗಲ್‌ನಲ್ಲಿ ಇ-ಸಂಜೀವಿನಿ ಒಪಿಡಿ ಎಂದು ನಮೂದಿಸಿ, ನೋಂದಣಿ ಮಾಡಿಕೊಳ್ಳಬೇಕು. ವೆಬ್ ವೀಡಿಯೋ ಮೂಲಕ ಸಂಪರ್ಕಕ್ಕೆ ಬರುವ ವೈದ್ಯರಿಗೆ ಕಾಡುತ್ತಿರುವ ಸಮಸ್ಯೆ ಕುರಿತು ವಿವರಿಸಿದರೆ ವೈದ್ಯರು ಸಮಸ್ಯೆಗೆ ತಕ್ಕಂತೆ ಚಿಕಿತ್ಸೆ ಬರೆದುಕೊಡಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಸಲಹೆ ನೀಡಿದ್ದಾರೆ. ಆ್ಯಪ್‌ನಲ್ಲಿ ಕೆಲ ಮಾಹಿತಿ ದಾಖಲಿಸಿದ ಬಳಿಕ ಟೋಕನ್ ನಂಬರ್ ದೊರೆಯಲಿದ್ದು, ಟೋಕನ್ ನಂಬರ್ ನೀಡಿ ವೈದ್ಯರನ್ನು ವೀಡಿಯೋಕಾಲ್ ಮೂಲಕ ಸಂಪರ್ಕಿಸಬಹುದು. ಈ ಸೇವೆ ಪ್ರತಿದಿನ ಬೆಳಿಗ್ಗೆ ೯ ಗಂಟೆಯಿAದ ರಾತ್ರಿ ೯ ಗಂಟೆಯವರೆಗೆ ಲಭ್ಯವಿರುತ್ತದೆ. ಒಮ್ಮೆ ನೋಂದಣಿ ಆದವರು ಮತ್ತೊಮ್ಮೆ ನೋಂದಣಿ ಮಾಡಿಕೊಳ್ಳುವ ಅಗತ್ಯವಿಲ್ಲ. ಕೊಡಗು ಜಿಲ್ಲೆಯಲ್ಲಿ ವೈದ್ಯಕೀಯ ಆಸ್ಪತ್ರೆ ಹಾಗೂ ಸಾರ್ವಜನಿಕ ಆಸ್ಪತ್ರೆ ವೀರಾಜಪೇಟೆ, ಸಾರ್ವಜನಿಕ ಆಸ್ಪತ್ರೆ ಸೋಮವಾರ ಪೇಟೆ ವೈದ್ಯಾಧಿಕಾರಿಗಳನ್ನು ವೀಡಿಯೋ ಕಾಲ್ ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ತಿಳಿಸಿದ್ದಾರೆ.