ಮಡಿಕೇರಿ, ಆ. ೧೪: ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ೨೦೨೧-೨೨ ನೇ ಸಾಲಿನಲ್ಲಿ ಐಐಟಿ, ಐಐಐಟಿ, ಐಐಎಂ, ಎನ್‌ಐಟಿ, ಐಐಎಸ್ ಇಆರ್, ಎಐಐಎಂಎಸ್, ಎನ್‌ಎಲ್‌ಯು, ಐಎನ್‌ಐ ಮತ್ತು ಐಯುಎಸ್‌ಎಲ್‌ಎಗಳಂತಹ ರಾಷ್ಟಿçÃಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಂತಹ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ ಅವಧಿಯಲ್ಲಿ ಒಂದು ಬಾರಿ ತಲಾ ರೂ. ೨ ಲಕ್ಷಗಳ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.