ಸುಂಟಿಕೊಪ್ಪ: ಗ್ರಾಮ ಮಟ್ಟದ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳೆಯರಿಗೆ ಸ್ತನ್ಯಪಾನದ ಜಾಗೃತಿ ಕಾರ್ಯಾಗಾರ ನಡೆಸಲಾಯಿತು. ಕೆದಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾದ ಗ್ರಾಮ ಮಟ್ಟದ ಸ್ತನ್ಯಪಾನ ಸಪ್ತಾಹ ಸಮಾರಂಭದ ಅಧ್ಯಕ್ಷತೆಯನ್ನು ಕೆದಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಸ್ಮಿತ ವಹಿಸಿದ್ದರು. ಆರೋಗ್ಯ ಕಾರ್ಯಕರ್ತೆ ಕವಿತಾ ಹಾಗೂ ಪಂಚಾಯಿತಿ ಸದಸ್ಯೆ ಪಾರ್ವತಿ ಸೋಮಯ್ಯ ಸ್ತನ್ಯಪಾನ ಮಹತ್ವದ ಬಗ್ಗೆ ಮಹಿಳೆಯರಿಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್, ಮತ್ತಿತರರು ಇದ್ದರು. ಸಮಾರಂಭದ ಮೊದಲಿಗೆ ನಳಿನಿ ಶಿವಣ್ಣ, ಬಿಂದು ಪ್ರಾರ್ಥಿಸಿ, ಮಂಜುಳ ಸ್ವಾಗತಿಸಿ, ಶೋಭ ವಂದಿಸಿದರು.ಕೊಡ್ಲಿಪೇಟೆ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪವಿತ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸ್ತನ್ಯಪಾನದ ಮಹತ್ವದ ಬಗ್ಗೆ ವಿವರಿಸಿದರಲ್ಲದೇ ಗರ್ಭಿಣಿ ಹಾಗೂ ಬಾಣಂತಿಯರಿಗೆ ಜಾಗೃತಿ ಮೂಡಿಸಿದರು. ಈ ಸಂದರ್ಭ ಕ್ಷೇತ್ರ ಆರೋಗ್ಯಾಧಿಕಾರಿ ಮಂಜುಳಾ, ಆರೋಗ್ಯ ನಿರೀಕ್ಷಕಿ ದುಂಬಿತ, ಆರೋಗ್ಯ ಸುರಕ್ಷಾಧಿಕಾರಿ ವನಿತ ಸೇರಿದಂತೆ ಇತರರು ಉಪಸ್ಥಿತರಿದ್ದರು.