ಮಡಿಕೇರಿ, ಆ. ೧೭: ಪ್ರಸಕ್ತ ಸಾಲಿನಲ್ಲಿ ಉಂಟಾಗಿರುವ ವಾತಾವರಣದ ಅಸಹಜತೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಲವು ತಾಲೂಕುಗಳನ್ನು ರಾಜ್ಯ ಸರಕಾರ ಅತಿವೃಷ್ಟಿ ಹಾಗಾ ಪ್ರವಾಹ ಪೀಡಿತ ತಾಲೂಕು ಎಂದು ಕೆಲದಿನಗಳ ಹಿಂದೆ ಘೋಷಣೆ ಮಾಡಿದೆ. ಈ ಪಟ್ಟಿಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕು ಸೇರ್ಪಡೆಗೊಂಡಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.