ಮಡಿಕೇರಿ, ಆ. ೧೭: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗೆ ೧೦೦ ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಬ್ಯಾಂಕ್‌ನ ಶತಮಾನೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ತಾ. ೨೦ ರಂದು ಸಮಾರಂಭ ನಿಗದಿಯಾಗಿದೆ. ಅಂದು ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ಕೇಂದ್ರ ಕಚೇರಿಯಲ್ಲಿ ಕಾರ್ಯಕ್ರಮ ಹಾಗೂ ಬಳಿಕ ೧೦.೩೦ಕ್ಕೆ ಕ್ರಿಸ್ಟಲ್ ಕೋರ್ಟ್ನಲ್ಲಿ ಸಭಾ ಕಾರ್ಯಕ್ರಮ ಜರುಗಲಿವೆ.

ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಪಿ. ಗಣಪತಿ ಅಧ್ಯಕ್ಷತೆಯಲ್ಲಿ ಸಮಾರಂಭ ಜರುಗಲಿದೆ. ರಾಜ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಶತಮಾನೋತ್ಸವದ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸಪೂಜಾರಿ ಅವರು ಉಪಸ್ಥಿತರಿರಲಿದ್ದು, ಸಭಾ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಉದ್ಘಾಟಿಸಲಿದ್ದಾರೆ. ಸಂಸದ ಪ್ರತಾಪ್ ಸಿಂಹ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದು, ಮೊಬೈಲ್ ಬ್ಯಾಂಕಿAಗ್ ವಾಹನವನ್ನು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಬೆಳ್ಳಿ ಪ್ರಕಾಶ್, ಎಂಎಲ್‌ಸಿಗಳಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಮಾಜಿ ಸಚಿವ ಹಾಗೂ ಹಿರಿಯ ಸಹಕಾರಿ ಎಂ.ಸಿ. ನಾಣಯ್ಯ, ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿಕುಶಾಲಪ್ಪ ಹಾಗೂ ಇತರ ಪ್ರಮುಖರು ಪಾಲ್ಗೊಳ್ಳಲಿರುವರು.