ಕುಶಾಲನಗರ, ಆ. ೧೭: ಬಿಪಿಎಲ್ ಪಡಿತರ ಚೀಟಿಯ ನೂತನ ನೀತಿಯನ್ನು ವಿರೋಧಿಸಿ ಕೊಡಗು ಜಿಲ್ಲಾ ಯುವ ಜೆಡಿಎಸ್ ನೇತೃತ್ವದಲ್ಲಿ ಕುಶಾಲನಗರ ತಾಲೂಕು ಕಛೇರಿ ಎದುರು ಪ್ರತಿಭಟನೆ ನಡೆಯಿತು. ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಲ್. ವಿಶ್ವ ನೇತೃತ್ವದಲ್ಲಿ ಸರ್ಕಾರದ ನೂತನ ಆದೇಶದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಡಜನತೆ ಪಡಿತರ ಚೀಟಿ ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ. ತಕ್ಷಣ ಆದೇಶವನ್ನು ಪುನರ್ ಪರಿಶೀಲನೆ ನಡೆಸಬೇಕೆಂದು ಆಗ್ರಹಿಸಲಾಯಿತು.
ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಲಸಿಕೆ ನೀಡುವಲ್ಲಿ ವಿಳಂಬವಾಗುತ್ತಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯಿಂದ ಸಾಮಾನ್ಯ ಜನಕ್ಕೆ ಸಮಸ್ಯೆ ಉಂಟಾಗಿದೆ ಎಂದು ರಾಜ್ಯಪಾಲರಿಗೆ ತಾಲೂಕು ತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿದರು
ಪ್ರತಿಭಟನೆಯಲ್ಲಿ ಪ್ರಮುಖರಾದ ರವಿಕುಮಾರ್, ಶರತ್, ರಾಜು ಮತ್ತಿತರರು ಇದ್ದರು.