ಮಡಿಕೇರಿ, ಆ. ೧೭: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಮೂರ್ನಾಡು ಅರೆಭಾಷೆ ಗೌಡ ಸಮಾಜ ವತಿಯಿಂದ ಆಯೋಜನೆ ಗೊಂಡಿರುವ ಅರೆಭಾಷೆ ಸಂಸ್ಕೃತಿ ಶಿಬಿರಕ್ಕೆ ಚಾಲನೆ ನೀಡಲಾಯಿತು.
ಗೌಡಸಮಾಜ ಅಧ್ಯಕ್ಷ ಪಾಣತ್ತಲೆ ಟಿ. ಹರೀಶ್ ಕಾರ್ಯಕ್ರಮ ಉದ್ಘಾಟಿಸಿ ಗೌಡ ಸಂಸ್ಕೃತಿಯ ಉಳಿವಿನ ಬಗ್ಗೆ ಮಾತನಾಡಿದರು.
ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃ ನಾರಾಯಣ ಕಜೆಗದ್ದೆ ಮಾತನಾಡಿ, ಗೌಡ ಹಾಗೂ ಅರೆಭಾಷೆ ಸಂಸ್ಕೃçತಿ, ಪರಂಪರೆಯ ಬೆಳವಣಿಗೆಗೆ ಪ್ರತಿಯೊಬ್ಬರು ಕೈಜೋಡಿ¸ Àಬೇಕೆಂದರು.
ನಿವೃತ್ತ ಪ್ರಾಧ್ಯಾಪಕಿ ಪ್ರೊ. ದಂಬೆಕೋಡಿ ಸುಶೀಲ ಸುಬ್ರಮಣಿ ಮಾತನಾಡಿ, ಅರೆಭಾಷಿಗರ ಪದ್ಧತಿಗಳ, ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು ಸಭೆಯಲ್ಲಿ ಅಕಾಡೆಮಿಯ ಸದಸ್ಯರು ಗ್ರಾಮ ಪಂಚಾಯಿತಿ ಸದಸ್ಯರು, ಶಿಬಿರದ ಸಂಪನ್ಮೂಲ ವ್ಯಕ್ತಿಗಳು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು. ತಾ. ೧೯ಕ್ಕೆ ಶಿಬಿರ ಸಮಾರೋಪಗೊಳ್ಳಲಿದೆ.