ಮೈಸೂರು, ಆ. ೧೭: ಅರಣ್ಯ ಸಂರಕ್ಷಣೆಗೆ ಸಂಬAಧಿಸಿದ ಕಾನೂನುಗಳು ಕರ್ನಾಟಕ ರಾಜ್ಯದಲ್ಲಿ ಬಹಳಷ್ಟು ಕಠಿಣವಾಗಿವೆ. ರೈತರು ತಮ್ಮ ಸ್ವಂತ ಜಮೀನಿನಲ್ಲಿ ಬೆಳೆಸಿದ ಮರ ಕಡಿಯಲೂ ಸಾಧ್ಯವಾಗದ ಪರಿಸ್ಥಿತಿ ಇದೆ. ಇದರಿಂದ ರೈತರಿಗೆ ತೊಂದರೆ ಉಂಟಾಗುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರಕಾರವು ಅರಣ್ಯ ಕೃಷಿಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಶ್ರೀಗಂಧ ಸೇರಿದಂತೆ ಎಲ್ಲಾ ರೀತಿಯ ಮರಗಳನ್ನು ಕಡಿದು ಸಾಗಾಟ ಮಾಡುವುದಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈಗಿರುವ ಕಾಯ್ದೆ ಸಡಿಲಗೊಳಿಸುವ ಪ್ರಯತ್ನವನ್ನು ಪ್ರಧಾನಿ ಮೋದಿ ನಡೆಸುತ್ತಿದ್ದಾರೆ ಎಂದು ಅವರು ಮೈಸೂರಿನಲ್ಲಿ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲೂ ಕಾನೂನು ಸಡಿಲಗೊಳಿಸಬೇಕು, ಮರ ಕಡಿಯಲು ರೈತರಿಗೆ ಅವಕಾಶವಿಲ್ಲವೆಂದರೆ ಬೆಳೆಯಲು ಮನಸ್ಸು ಮಾಡುತ್ತಾರೆಯೇ? ಈ ಸಂಬAಧ ಅರಣ್ಯ ಸಚಿವ ಉಮೇಶ್ ಕತ್ತಿ ಜೊತೆ ಚರ್ಚಿಸಿದ್ದೇನೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.