ಮಡಿಕೇರಿ, ಆ. ೧೭: ಕೊಡಗು ಛಾಯಾ ಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾ. ೧೯ ರಂದು ಮಡಿಕೇರಿಯ ಬಾಲಭವನದಲ್ಲಿ ೧೮೨ನೇ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಛಾಯಾಚಿತ್ರ ಪ್ರದರ್ಶನ ಹಾಗೂ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.