*ವೀರಾಜಪೇಟೆ, ಆ. ೧೭: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ವೀರಾಜಪೇಟೆ ಸವಿತಾ ಸಮಾಜ ಒತ್ತಾಯಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಮಾಜದ ಅಧ್ಯಕ್ಷ ದೇವರಾಜ್, ಹಿರಿತನದ ಆಧಾರದಲ್ಲಿ ಬೋಪಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು. ವಿಧಾನಸಭಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಪ್ರಕೃತಿ ವಿಕೋಪ, ಕೊರೊನಾ ಪರಿಸ್ಥಿತಿಯಲ್ಲಿ ಕೊಡಗಿನ ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಿದ್ದು, ಅವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಆಗ್ರಹಿಸಿದ್ದಾರೆ.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಎಂ.ಕೆ ಬಶೀರ್, ಕಾರ್ಯದರ್ಶಿ ವೇದಪಂಡ ರಮೇಶ್, ಗೌರವ ಅಧ್ಯಕ್ಷರುಗಳಾದ ರಾಜ, ಲವಕುಮಾರ್, ರವಿ, ಅನಿಲ್ ಕುಮಾರ್ ಹಾಜರಿದ್ದರು.