(3).jpg)
ಮಡಿಕೇರಿ, ಆ. ೧೭: ದಕ್ಷಿಣಕನ್ನಡ ಮತ್ತು ಕರಾವಳಿ ಜಿಲ್ಲೆಗಳ ಭಾಗದಲ್ಲಿ ಹೆಚ್ಚುತ್ತಿರುವ ಲವ್‌ಜಿಹಾದ್ ಮತ್ತು ಉಗ್ರಗಾಮಿ ಕೃತ್ಯಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಕ್ಕೇರ ಅಜಿತ್ ಐಸಿಸ್ ಉಗ್ರಗಾಮಿ ಸಂಘಟನೆಯೊAದಿಗೆ ಉಳ್ಳಾಲದ ಮಾಜಿ ಶಾಸಕರೊಬ್ಬರ ಸಂಬAಧಿಗಳು ಸಂಪರ್ಕ ಹೊಂದಿದ್ದ ಬಗ್ಗೆ ರಾಷ್ಟಿçÃಯ ತನಿಖಾ ದಳ ಪತ್ತೆಹಚ್ಚಿದ್ದು, ಮಂಗಳೂರು, ಉಳ್ಳಾಲ, ಉಡುಪಿ, ಭಟ್ಕಳ ಹಾಗೂ ಕೊಡಗು ಈ ಪ್ರದೇಶಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚುತ್ತಿರುವುದು ನಾಗರಿಕರ ಆತಂಕಕ್ಕೆ ಕಾರಣವಾಗಿದೆ ಎಂದರು. ಆದ್ದರಿಂದ ಮಂಗಳೂರಿನಲ್ಲಿ ಇದುವರೆಗೆ ನಡೆದಿರುವ ಎಲ್ಲಾ ಭಯೋತ್ಪಾದಕ ಚಟುವಟಿಕೆಗಳು ಮತ್ತು ಕೇರಳ ಹಾಗೂ ಭಟ್ಕಳದ ನಂಟು ಹೊಂದಿರುವ ಉಗ್ರಗಾಮಿ ಸಂಘಟನೆಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ಮಂಗಳೂರಿನಲ್ಲಿ ರಾಷ್ಟಿçÃಯ ತನಿಖಾದಳ ಕಚೇರಿಯನ್ನು ತೆರೆಯಬೇಕು ಎಂದು ಒತ್ತಾಯಿಸಿದರು.
ಲವ್‌ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮತಾಂತರ ಮಾಡಿ ಉಗ್ರಗಾಮಿ ಹಾಗೂ ಸಮಾಜ ಘಾತುಕ ಚಟುವಟಿಕೆಗಳಿಗೆ ಬಳಸಿಕೊಳ್ಳ ಲಾಗುತ್ತಿದೆ ಎಂದು ಆರೋಪಿಸಿದ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕಳೆದ ಹತ್ತು ವರ್ಷಗಳಲ್ಲಿ ಲವ್ ಜಿಹಾದ್‌ಗೆ ಒಳಗಾಗಿರುವ ಹಿಂದೂ ಯುವತಿಯರ ಸ್ಥಿತಿಗತಿಗಳು ಹೇಗಿದೆ ಎನ್ನುವ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಲವ್‌ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕೆಂದರು. ದಕ್ಷಿಣ ಕನ್ನಡ ಮತ್ತು ಕರಾವಳಿ ಜಿಲ್ಲೆಗಳ ಕಡಲ ತಡಿಯು ದೇಶದ ಗಡಿಯಾಗಿದ್ದು, ಉತ್ತರ ಕನ್ನಡದಿಂದ ಮಂಗಳೂರು ಉಳ್ಳಾಲದವರೆಗೆ ಇರುವ ಕಡಲ ತಡಿಯ ಮೂಲಕ ವಿಧ್ವಂಸಕಾರಿ ಶಕ್ತಿಗಳು ಒಳಬಾರದಂತೆ ವಿಶೇಷ ಭದ್ರತಾ ವ್ಯವಸ್ಥೆ ಕೈಗೆತ್ತಿಕೊಳ್ಳಬೇಕೆಂದು ಅಜಿತ್ ಒತ್ತಾಯಿಸಿದರು.
(ಮೊದಲ ಪುಟದಿಂದ) ಬಳಿಕ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಪ್ರಚಾರ ಪ್ರಮುಖ್ ಕುಮಾರ್, ಮಡಿಕೇರಿ ತಾಲೂಕು ಅಧ್ಯಕ್ಷ ಮಗೇರನ ಬೆಳ್ಯಪ್ಪ, ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೀರೇಶ್ ಅಜ್ಜಣ್ಣನವರ್, ಭಜರಂಗದಳ ಪ್ರಮುಖರಾದ ವಿನಯ್, ಮನುರೈ, ದುರ್ಗೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಡಿಕೇರಿ ತಾಲೂಕು ಅಧ್ಯಕ್ಷ ಕಾಂಗೀರ ಸತೀಶ್, ನಗರಾಧ್ಯಕ್ಷ ಮನುಮಂಜುನಾಥ್, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ, ನಗರಸಭಾ ಸದಸ್ಯರುಗಳಾದ ಅಪ್ಪಣ್ಣ, ಅರುಣ್ ಶೆಟ್ಟಿ, ಚಂದ್ರ, ಉಮೇಶ್ ಸುಬ್ರಮಣಿ, ಶ್ವೇತಾ, ಸಬಿತಾ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ ಮತ್ತಿತರರು ಇದ್ದರು.
ವೀರಾಜಪೇಟೆಯಲ್ಲಿ ಪ್ರತಿಭಟನೆ
ವೀರಾಜಪೇಟೆ ತಾಲೂಕು ಕಚೇರಿ ಎದುರು ತಾಲೂಕು ಹಿಂದೂ ಜಾಗರಣಾ ವೇದಿಕೆ ವತಿಯಿಂದ ಲವ್ ಜಿಹಾದ್ ಹಾಗೂ ಕರಾವಳಿಯಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಡಾ. ಆರ್. ಯೋಗಾನಂದ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಹಿಂ. ಜಾ.ವೇ. ಸಂಘಟನಾ ಕಾರ್ಯದರ್ಶಿ ಮಹೇಶ್ ಮಾತನಾಡಿ, ಇಂದಿಗೂ ಕೂಡ ಕೊಡಗಿನಲ್ಲಿ ಕಾಡುಗಳಲ್ಲಿ ಭಯೋತ್ಪಾದನಾ ಕೃತ್ಯಗಳಿಗೆ ತರಬೇತಿ ನೀಡಲಾಗುತ್ತಿದೆ ಎಂಬ ಮಾಹಿತಿ ನಮಗಿದೆ. ಆದರೆ ಇಲಾಖೆಗೆ ಗೊತ್ತಿಲ್ಲ ಎಂದು ದೂರಿದರು.
ನೆರೆಯ ಕೇರಳ ರಾಜ್ಯದಲ್ಲಿ ಹಾಗೂ ಮಂಗಳೂರಿನಲ್ಲಿ ಭಯೋತ್ಪಾದನೆ ಮತ್ತು ಲವ್‌ಜಿಹಾದ್‌ನಂತಹ ಪ್ರಕರಣ ಹೆಚ್ಚುತ್ತಿದ್ದು, ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳದಿದ್ದರೆ ಕೊಡಗೂ ಸಹ ಲವ್‌ಜಿಹಾದ್ ಹಾಗೂ ಭಯೋತ್ಪಾದಕ ಚಟುವಟಿಕೆಯ ತಾಣವಾಗುವದರಲ್ಲಿ ಸಂದೇಹ ಇಲ್ಲ ಎಂದು ಮಹೇಶ್ ಹೇಳಿದರು.
ಪ್ರತಿಭಟನೆ ಸಂದರ್ಭ ಹಿಂದೂ ಜಾಗರಣಾ ವೇದಿಕೆಯ ತಾಲೂಕು ಅಧ್ಯಕ್ಷ ಪ್ರಿನ್ಸ್ ಗಣಪತಿ, ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಮೇವಡ ಅಯ್ಯಣ್ಣ ವೇದಿಕೆ ವತಿಯಿಂದ ಲವ್ ಜಿಹಾದ್ ಹಾಗೂ ಕರಾವಳಿಯಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಡಾ. ಆರ್. ಯೋಗಾನಂದ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಹಿಂ. ಜಾ.ವೇ. ಸಂಘಟನಾ ಕಾರ್ಯದರ್ಶಿ ಮಹೇಶ್ ಮಾತನಾಡಿ, ಇಂದಿಗೂ ಕೂಡ ಕೊಡಗಿನಲ್ಲಿ ಕಾಡುಗಳಲ್ಲಿ ಭಯೋತ್ಪಾದನಾ ಕೃತ್ಯಗಳಿಗೆ ತರಬೇತಿ ನೀಡಲಾಗುತ್ತಿದೆ ಎಂಬ ಮಾಹಿತಿ ನಮಗಿದೆ. ಆದರೆ ಇಲಾಖೆಗೆ ಗೊತ್ತಿಲ್ಲ ಎಂದು ದೂರಿದರು.
ನೆರೆಯ ಕೇರಳ ರಾಜ್ಯದಲ್ಲಿ ಹಾಗೂ ಮಂಗಳೂರಿನಲ್ಲಿ ಭಯೋತ್ಪಾದನೆ ಮತ್ತು ಲವ್‌ಜಿಹಾದ್‌ನಂತಹ ಪ್ರಕರಣ ಹೆಚ್ಚುತ್ತಿದ್ದು, ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳದಿದ್ದರೆ ಕೊಡಗೂ ಸಹ ಲವ್‌ಜಿಹಾದ್ ಹಾಗೂ ಭಯೋತ್ಪಾದಕ ಚಟುವಟಿಕೆಯ ತಾಣವಾಗುವದರಲ್ಲಿ ಸಂದೇಹ ಇಲ್ಲ ಎಂದು ಮಹೇಶ್ ಹೇಳಿದರು.
ಪ್ರತಿಭಟನೆ ಸಂದರ್ಭ ಹಿಂದೂ ಜಾಗರಣಾ ವೇದಿಕೆಯ ತಾಲೂಕು ಅಧ್ಯಕ್ಷ ಪ್ರಿನ್ಸ್ ಗಣಪತಿ, ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಮೇವಡ ಅಯ್ಯಣ್ಣ ಕುಶಾಲನಗರ
ಲವ್ ಜಿಹಾದ್ ಮತ್ತು ಭಯೋತ್ಪಾದಕಾ ಕೃತ್ಯಗಳಲ್ಲಿ ತೊಡಗಿರುವ ದುಷ್ಕರ್ಮಿಗಳನ್ನು ಬಂಧಿಸಬೇಕೆAದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಕುಶಾಲನಗರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಹಿಂದೂ ಜಾಗರಣಾ ವೇದಿಕೆ ಆಶ್ರಯದಲ್ಲಿ ನಡೆದ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡದ ಕಬಕ ವ್ಯಾಪ್ತಿಯಲ್ಲಿ ನಡೆದ ರಥಯಾತ್ರೆ ಅಡ್ಡಿ ಪ್ರಕರಣ, ಲವ್ ಜಿಹಾದ್ ಪ್ರಕರಣಗಳಲ್ಲಿ ಪಾಲ್ಗೊಳ್ಳುತ್ತಿರುವ ವ್ಯಕ್ತಿಗಳನ್ನು ಪತ್ತೆಹಚ್ಚಿ ಬಂಧಿಸುವAತೆ ಆಗ್ರಹಿಸಿದರು.
ನಂತರ ತಾಲೂಕು ಕಚೇರಿ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಹಸ್ತಾಂತರಿಸಿದರು. ಬಿಜೆಪಿ ಸೇರಿದಂತೆ ಹಿಂದೂ ಪರ ಸಂಘಟನೆಗಳ ಪ್ರಮುಖರಾದ ಕೆ ಜಿ ಮನು, ಅನೀಶ್, ಲಕ್ಷಿö್ಮÃ ನಾರಾಯಣ, ವೈಶಾಕ್, ಅಮೃತ್ ರಾಜ್, ಮಧು, ಸಂತೋಷ್ , ಮಂಜುನಾಥ್ ಕೃಷ್ಣಪ್ಪ, ಎಂ.ವಿ. ನಾರಾಯಣ, ಪುಂಡರೀಕಾಕ್ಷ ಮತ್ತಿತರರು ಇದ್ದರು.
ಸೋಮವಾರಪೇಟೆಯಲ್ಲಿ ಪ್ರತಿಭಟನೆ
ಹೆಚ್ಚುತ್ತಿರುವ ಭಯೋತ್ಪಾದನಾ ಚಟುವಟಿಕೆಗಳು ಮತ್ತು ಲವ್ ಜಿಹಾದ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟಿçÃಯ ತನಿಖಾ ದಳದ ಘಟಕ ತೆರೆಯಬೇಕೆಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.
ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚುತ್ತಿದ್ದು, ಹಿಂದೂ ಯುವತಿಯರನ್ನು ಲವ್ ಜಿಹಾದ್ ಬಲೆಗೆ ಬೀಳಿಸಿ ಅವರನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸುವ ವ್ಯವಸ್ಥಿತ ಷಡ್ಯಂತ್ರ‍್ಯದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಆಗ್ರಹಿಸಿದರು.
ಕೋಮು ಹಿಂಸಾಚಾರ ಮತ್ತು ಉಗ್ರಗಾಮಿ ಚಟುವಟಿಕೆಗಳಿಗೆ ನೈತಿಕ ಹಾಗೂ ಆರ್ಥಿಕ ಬೆಂಬಲವನ್ನು ನೀಡುತ್ತಿರುವವರ ಬಗ್ಗೆ ತನಿಖೆ ನಡೆಸಿ ಆರ್ಥಿಕ ಮೂಲವನ್ನು ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ದೇಶದ ಯುವ ಜನತೆಗೆ ಮಾರಕವಾಗಿರುವ ಮಾದಕದ್ರವ್ಯಗಳ ಜಾಲವನ್ನು ಬುಡಸಹಿತ ಕಿತ್ತೊಗೆಯಲು ವಿಶೇಷ ಕಾನೂನನ್ನು ರಾಜ್ಯ ಸರ್ಕಾರ ರಚಿಸಬೇಕೆಂದು ಆಗ್ರಹಿಸಿ ತಾಲೂಕು ಕಚೇರಿಯ ಶಿರಸ್ಥೇದಾರ್ ಮಹೇಶ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷ ಎಂ.ಬಿ. ಉಮೇಶ್, ಪ್ರಧಾನ ಕಾರ್ಯದರ್ಶಿ ಸುನೀಲ್, ಕಾರ್ಯದರ್ಶಿ ಬೋಜೇಗೌಡ, ಪದಾಧಿಕಾರಿಗಳಾದ ಬಿ.ಜೆ. ದೀಪಕ್, ಬಿ. ಶಿವಪ್ಪ, ಹಾಲಪ್ಪ, ಸಿ.ಸಿ. ನಂದ, ರಾಘವ, ಪ್ರದೀಪ್, ಯಡೂರು ದರ್ಶನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.