ಮಡಿಕೇರಿ, ಆ. ೧೭: ಪ್ರಸಕ್ತ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ಕಾರ್ಯಕ್ರಮಗಳು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಮೈಕ್ರೋ ಕ್ರೆಡಿಟ್ (ಪ್ರೇರಣಾ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ) ಯೋಜನೆ, ಭೂ ಒಡೆತನ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷö್ಮ ಮತ್ತು ಅತಿ ಸೂಕ್ಷö್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ವಿವಿಧ ಯೋಜನೆಗಳು; ಸ್ವಯಂ ಉದ್ಯೋಗ ಕಾರ್ಯಕ್ರಮಗಳು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ. ಮೈಕ್ರೋ ಕ್ರೆಡಿಟ್ (ಪ್ರೇರಣಾ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ) ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು). ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ನಿಗಮದ ವೆಬ್ಸೈಟ್ ತಿತಿತಿ.ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅಪ್ಲೋಡ್ ಮಾಡಿ ಸೆಪ್ಟೆಂಬರ್ ೨ ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಡಿಕೇರಿ, ಕೊಡಗು ಜಿಲ್ಲೆ-೫೭೧೨೦೧, ದೂ.ಸಂ. ೦೮೨೭೨-೨೨೮೮೫೭ ನ್ನು ಸಂಪರ್ಕಿಸಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಮಡಿಕೇರಿ : ೨೦೨೧-೨೨ ನೇ ಸಾಲಿನ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬAಧಿತ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಕಾರ್ಯಕ್ರಮ ಗಳು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ) ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಭೂ ಒಡೆತನ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ. ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ನಿಗಮದ ವೆಬ್ಸೈಟ್ hಣಣಠಿs://ಚಿಜiರಿಚಿmbಚಿvಚಿ.oಟಿಟiಟಿe ಮೂಲಕ ಅಪ್ಲೋಡ್ ಮಾಡಿ ಸೆಪ್ಟೆಂಬರ್ ೨ ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಮಡಿಕೇರಿ, ಕೊಡಗು ಜಿಲ್ಲೆ -೫೭೧೨೦೧. ದೂ.ಸಂ. ೦೮೨೭೨-೨೨೮೮೫೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಸಾಲ ಸೌಲಭ್ಯಕ್ಕೆ
ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದಿಂದ ಸಫಾಯಿ ಕರ್ಮಚಾರಿಗಳು ಹಾಗೂ ಮ್ಯಾನ್ಯುಯಲ್ ಸ್ಕಾö್ಯವೆಂರ್ಸ್ಗಳ ಆರ್ಥಿಕ ಅಭಿವೃದ್ಧಿಗೆ ಸ್ವಯಂ ಉದ್ಯೋಗ ಉದ್ಯಮ ಶೀಲತಾ ಅಭಿವೃದ್ಧಿ, ಐರಾವತ, ಮೈಕ್ರೋ ಕ್ರೆಡಿಟ್ ಪ್ರೇರಣಾ (ಮಹಿಳಾ ಸ್ವ-ಸಹಾಯ ಗುಂಪುಗಳಿಗೆ) ಮತ್ತು ಭೂ ಒಡೆತನ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ನಿಗಮದ ವೆಬ್ಸೈಟ್ ಞssಞಜಛಿ೦೩@gmಚಿiಟ.ಛಿom ಮೂಲಕ ಅಪ್ಲೋಡ್ ಮಾಡಿ ಅರ್ಜಿಗಳನ್ನು ಸೆಪ್ಟೆಂಬರ್, ೨೦ ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ಮಡಿಕೇರಿ, ಕೊಡಗು ಜಿಲ್ಲೆ-೫೭೧೨೦೧ ದೂ.ಸಂ. ೦೮೨೭೨-೨೨೮೮೫೭ ನ್ನು ಜಿಲ್ಲೆಯ ವಿವಿಧ ಕ್ಲಬ್ಗಳ ಆಶ್ರಯದಲ್ಲಿ ಕ್ರೀಡಾಕೂಟಗಳಿಗೆ ಬೇಸಿಗೆ ಶಿಬಿರ ನಡೆಯುತ್ತಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಯಾವುದೇ ಬೇಸಿಗೆ ಶಿಬಿರಗಳು ನಡೆದಿಲ್ಲ. ಬೇಸಿಗೆ ಶಿಬಿರದ ಸಮಯದಲ್ಲಿ, ವಿವಿಧ ಕ್ಲಬ್ಗಳು ಹಾಗೂ ಕ್ರೀಡಾಪಟುಗಳು ಸ್ಪೋರ್ಟ್ಸ್ ಕಿಟ್ ಖರೀದಿ ಮಾಡುತ್ತಿದ್ದರು. ಆದರೆ ಬೇಸಿಗೆ ಶಿಬಿರಗಳು ನಡೆಯದೆ ಸ್ಪೋರ್ಟ್ಸ್ ಕಿಟ್ ಖರೀದಿ ಕೂಡ ಕುಂಠಿತವಾಗಿದೆ.
ಈ ಬಾರಿ ಮಾರ್ಚ್ ಹಾಗೂ ಏಪ್ರಿಲ್ ಮೊದಲ ವಾರ ಜಿಲ್ಲೆಯಲ್ಲಿ ಕ್ರೀಡಾಕೂಟಗಳು ಆರಂಭಗೊAಡಿತ್ತು.
ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ವಿವಿಧ ಜನಾಂಗದವರು ಕ್ರೀಡಾಕೂಟಗಳನ್ನು ಆಯೋಜಿಸಲು ದಿನಾಂಕ ಕೂಡ ನಿಗದಿಪಡಿಸಿದ್ದರು. ಆದರೆ ಕೋವಿಡ್ ಎರಡನೇ ಅಲೆ ಹೆಚ್ಚಳವಾಗುತ್ತಿದ್ದ ಕಾರಣದಿಂದ ವಿಧಿಸಲಾಗಿದ್ದ ಲಾಕ್ ಡೌನ್ನಿಂದ ಎಲ್ಲಾ ಕ್ರೀಡಾಕೂಟಗಳು ರದ್ದುಗೊಂಡವು.
ಕ್ರೀಡಾಪಟುಗಳು ಹಾಗೂ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ಕಳೆದ ಎರಡು ವರ್ಷಗಳಿಂದ ಕೋವಿಡ್ ಕರಿನೆರಳಿನಿಂದ ಜಿಲ್ಲೆಯ ಕ್ರೀಡಾಕೂಟಗಳ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ.
ಮಾರ್ಚ್ ತಿಂಗಳಿನಿAದ ಮೇ ತಿಂಗಳವರೆಗೆ ಜಿಲ್ಲೆಯಲ್ಲಿ ನಡೆಯುವ ವಿವಿಧ ಕ್ರೀಡಾಕೂಟಗಳಿಗೆ ಬೇಕಾದ ಕ್ರೀಡಾ ಪರಿಕರಗಳ ಖರೀದಿ ಜೋರಾಗಿ ನಡೆಯುತ್ತಿತ್ತು.
ಇದರಿಂದ ಸ್ಪೋರ್ಟ್ಸ್ ಅಂಗಡಿ ಮಾಲೀಕರಿಗೆ ಒಂದಷ್ಟು ವ್ಯಾಪಾರ ಕೂಡ ಆಗುತ್ತಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ವಿಧಿಸಲಾಗಿದ್ದ ಲಾಕ್ ಡೌನ್ನಿಂದ ಯಾವುದೇ ಕ್ರೀಡಾಕೂಟಗಳು ನಡೆಯದೆ, ಸ್ಪೋರ್ಟ್ಸ್ ಅಂಗಡಿ ಮಾಲೀಕರು ನಷ್ಟ ಅನುಭವಿಸುತ್ತಿದ್ದಾರೆ.
ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ವಿದ್ಯಾಸಿರಿ ಯೋಜನೆಯಡಿ ಸಹಾಯಧನ
ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ೨೦೨೧-೨೨ ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ “ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ” ಯಡಿ ಸರ್ಕಾರಿ/ ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೆ ಇರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಇಲಾಖೆ ವೆಬ್ ಸೈಟ್ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ಸಂಬAಧಪಟ್ಟ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಯಿಂದ ಪಡೆದುಕೊಳ್ಳುವುದು. ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಸೆಪ್ಟೆಂಬರ್, ೩೦ ರೊಳಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿ, ಮೌಲಾನಾ ಅಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿಗೆ ಸಲ್ಲಿಸುವುದು.
ಯಾವುದೇ ಇಲಾಖೆಯ ಸರ್ಕಾರಿ/ಸರ್ಕಾರಿ ಅನುದಾನಿತ ವಿದ್ಯಾರ್ಥಿನಿಲಯ/ ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ಜಿಲ್ಲೆಯ ಜಿಲ್ಲಾ ಅಧಿಕಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಎಲ್ಲಾ ದಾಖಲಾತಿಗಳೊಂದಿಗೆ ಸಲ್ಲಿಸುವುದು. ಕುಟುಂಬದ ಆದಾಯ ಮಿತಿಯು ಪ್ರವರ್ಗ೧ ಕ್ಕೆ ರೂ.೨.೫೦ ಲಕ್ಷ ಹಾಗೂ ಪ್ರವರ್ಗ-೨ಎ (ಬೌದ್ಧ), ಪ್ರವರ್ಗ-೨ಬಿ (ಮುಸ್ಲಿಂ) ಮತ್ತು ಪ್ರವರ್ಗ೩ ಬಿ (ಕ್ರಿಶ್ಚಿಯನ್) ವರ್ಗಗಳಿಗೆ ರೂ.೨.೦೦ ಲಕ್ಷದ ಮಿತಿಯೊಳಗಿರಬೇಕು.
ಎಸ್ಎಸ್ಎಲ್ಸಿ. ಅಂಕಪಟ್ಟಿ, ಹಿಂದಿನ ವರ್ಷದ ಅಂಕಪಟ್ಟಿ (ವಾರ್ಷಿಕ/ ೨ ಸೆಮಿಸ್ಟರ್), ವಿದ್ಯಾರ್ಥಿಯ ಜಾತಿ ಮತ್ತು ಕುಟುಂಬದ ಆದಾಯ ಪ್ರಮಾಣ ಪತ್ರ (ತಹಶೀಲ್ದಾರರಿಂದ), ಆಧಾರ್ ಕಾರ್ಡ್ ಮತ್ತು ವಿದ್ಯಾರ್ಥಿಯ ಬ್ಯಾಂಕ್ ಖಾತೆ ಪಾಸ್ ಪುಸ್ತಕ, ಪ್ರಸಕ್ತ ವರ್ಷದ ಶುಲ್ಕ ರಶೀದಿ, ಮಾಹೆವಾರು ಹಾಜರಾತಿ ಪಟ್ಟಿ ಕಡ್ಡಾಯವಾಗಿ, ಕಾಲೇಜಿಗಿರುವ ದೂರದ ಬಗ್ಗೆ ದೃಢೀಕರಣ (ಸಂಬAಧಪಟ್ಟ ಪಂಚಾಯಿತಿ/ ಪ.ಪಂ./ ನಗರಸಭೆಯಿಂದ)ಅಗತ್ಯ ಮಾಹಿತಿಗೆ ಇಲಾಖಾ ವೆಬ್ಸೈಟ್ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ/ಞoಜಚಿgu/ಠಿubಟiಛಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, “ಮಾಹಿತಿ ಕೇಂದ್ರ” ಮೌಲಾನಾ ಅಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂ.ಸಂ. ೦೮೨೭೨-೨೨೫೫೨೮/೨೨೦೨೧೪ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.