ಸೋಮವಾರಪೇಟೆ, ಆ. ೧೭: ಇಲ್ಲಿನ ತಾಲೂಕು ಆಸ್ಪತ್ರೆಗೆ ಶಾಸಕ ರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾಕಷ್ಟು ಸೌಲಭ್ಯಗಳಿದ್ದರೂ ಮಳೆಗಾಲದಲ್ಲಿ ಕಟ್ಟಡ ಸೋರುತ್ತಿರುವ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು, ಹಳೆಯದಾದ ಕಟ್ಟಡದ ಮೇಲ್ಛಾವಣಿ ಶಿಥಿಲವಾಗಿದೆ. ಈಗಾಗಲೇ ಆಪರೇಷನ್ ಥಿಯೇಟರ್ ಕಟ್ಟಡಕ್ಕೆ ಶೀಟ್ ಅಳವಡಿಸಲಾಗಿದೆ. ಡಯಾಲಿಸಿಸ್ ಹಾಗೂ ಕೆಲವು ವಾರ್ಡ್ ಮೇಲ್ಭಾಗದಲ್ಲಿ ಶೀಟ್ ಅಳವಡಿಸಬೇಕಿದೆ. ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳೊಡನೆ ಮಾತನಾಡಿ ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈಗಾಗಲೇ ಗಂಟೆಗೆ ೩೯೦ ಲೀ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಗೆ ಕಟ್ಟಡ ನಿರ್ಮಾಣ ಕೆಲಸ ಮುಗಿದಿದ್ದು, ಸಿಲಿಂಡರ್ ಅಳವಡಿಸಬೇಕಿದೆ ಎಂದರು.

ತಾಲೂಕು ಕೇಂದ್ರದ ಆಸ್ಪತ್ರೆಗೆ ಈಗಾಗಲೇ ಕೆಲವು ವೈದ್ಯರ ನೇಮಕವಾಗಿದೆ. ಮತ್ತಷ್ಟು ವೈದ್ಯರ ನೇಮಕದ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ ಎಂದರು.

ಈ ಸಂದರ್ಭ ವೈದ್ಯಾಧಿಕಾರಿ ಡಾ.ಸತೀಶ್, ವೈದ್ಯರಾದ ಶುಶ್ರೂತ್, ಪ.ಪಂ.ಸದಸ್ಯರು ಗಳಾದ ಚಂದ್ರು, ಶರತ್, ಮಹೇಶ್, ಶಾಸಕರ ಆಪ್ತ ಸಹಾಯಕ ಆರ್.ಡಿ. ರವಿ, ಆಸ್ಪತ್ರೆಯ ವೈದ್ಯರಾದ ಸತೀಶ್, ಪ್ರಮುಖರಾದ ಕಿಬ್ಬೆಟ್ಟ ಮಧು, ಜೀವನ್, ಪ್ರದೀಪ್, ಕೆ.ಜಿ. ಸುರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.