ವೀರಾಜಪೇಟೆ, ಆ. ೧೮: ಅಕ್ರಮ ಗಾಂಜಾ ಮಾರಾಟ ಪ್ರಕರಣವೊಂದಕ್ಕೆ ಸಂಬAಧಿಸಿದAತೆ ಆರೋಪಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಗೆ ಐದು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ರೂ. ೩೦ ಸಾವಿರ ದಂಡ ವಿಧಿಸಿದೆ.

೨೦೧೫ರಲ್ಲಿ ಕಲ್ಲುಬಾಣೆಯ ನಿವಾಸಿ, ಮೊಹಮ್ಮದ್ ಆಲಿ ಎಂಬಾತನ ಮನೆಗೆ ಧಾಳಿ ನಡೆಸಿದ್ದ ವೀರಾಜಪೇಟೆ ನಗರ ಠಾಣಾ ಪೊಲೀಸರು ಆತನ ಬಳಿಯಿದ್ದ ೧ ಕೆ.ಜಿ. ೨೫೦ ಗ್ರಾಂ. ಗಾಂಜಾವನ್ನು ವಶಪಡಿಸಿಕೊಂಡು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯ ಆರೋಪಿ ಮೇಲಿನ ಆರೋಪ ಸಾಬೀತಾದ್ದರಿಂದ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.