ಸಿದ್ದಾಪುರ, ಆ. ೧೮: ಗುಹ್ಯ ಗ್ರಾಮದಲ್ಲಿ ಮಿತಿಮೀರಿದ ಕಾಡಾನೆ ಹಾವಳಿಯಿಂದಾಗಿ ಕೃಷಿ ಫಸಲುಗಳು ನಾಶವಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದ ಕಕ್ಕಟ್ಟುಕಾಡು ಭಾಗದ ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ಸಿದ್ದಾಪುರ, ಆ. ೧೮: ಗುಹ್ಯ ಗ್ರಾಮದಲ್ಲಿ ಮಿತಿಮೀರಿದ ಕಾಡಾನೆ ಹಾವಳಿಯಿಂದಾಗಿ ಕೃಷಿ ಫಸಲುಗಳು ನಾಶವಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದ ಕಕ್ಕಟ್ಟುಕಾಡು ಭಾಗದ ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ಸಿದ್ದಾಪುರ, ಆ. ೧೮: ಗುಹ್ಯ ಗ್ರಾಮದಲ್ಲಿ ಮಿತಿಮೀರಿದ ಕಾಡಾನೆ ಹಾವಳಿಯಿಂದಾಗಿ ಕೃಷಿ ಫಸಲುಗಳು ನಾಶವಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದ ಕಕ್ಕಟ್ಟುಕಾಡು ಭಾಗದ ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ಕಕ್ಕಟ್ಟುಕಾಡು ಗ್ರಾಮಸ್ಥರು ಸಂಜೆ ಕೆಲಸ ಬಿಟ್ಟು ಮನೆಗಳಿಗೆ ತೆರಳಲು ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗುಹ್ಯ ನಿವಾಸಿ ಸುರೇಶ್ ಪೂಜಾರಿ ಆತಂಕ ವ್ಯಕ್ತಪಡಿಸಿದ್ದಾರೆ. ಗುಹ್ಯ ಗ್ರಾಮದಲ್ಲಿ ಮರಿಯಾನೆಗಳು ಸೇರಿದಂತೆ ೧೦ಕ್ಕೂ ಅಧಿಕ ಕಾಡಾನೆಗಳು ರಾತ್ರಿ ಸಮಯದಲ್ಲಿ ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಲಗ್ಗೆಯಿಡುತ್ತಿದ್ದು ಇದೇ ಕಾಡಾನೆಗಳು ಇಂಜಿಲಗೆರೆ ಪುಲಿಯೇರಿ ಭಾಗಗಳಲ್ಲಿ ಕೂಡ ದಾಂಧಲೆ ನಡೆಸುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಉಪಟಳ ನೀಡುತ್ತಿರುವ ಕಾಡಾನೆಗಳ ಹಾವಳಿಯನ್ನು ಕೂಡಲೇ ತಡೆಗಟ್ಟಬೇಕೆಂದು ಗ್ರಾಮಸ್ಥರಾದ ಸುರೇಶ್ ಆಗ್ರಹಿಸಿದ್ದಾರೆ.