ಮಡಿಕೇರಿ ಆ.೧೮ : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ಜಿಲ್ಲಾ ಮಟ್ಟದ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳ ಸಭೆ ತಾ. ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷÀ ತೆನ್ನೀರಾ ಮೈನಾ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ಜನ್ಮ ದಿನವನ್ನು ಅಂದೇ ಆಚರಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಮಾಜಿ ಸಂಸದರು ಮತ್ತು ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷ ಸಿ.ನಾರಾಯಣ್ ಸ್ವಾಮಿ, ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಸಂಚಾಲಕ ವಿಜಯ್ ಸಿಂಗ್, ರಾಷ್ಟಿçÃಯ ಸಲಹೆಗಾರ ಡಿ.ಆರ್.ಪಾಟೀಲ್ ಘೋರ್ಪಡೆ, ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸAದೀಪ್ ಅವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ವಿಚಾರ ಮಂಡನೆ ಮಾಡಲಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾಅಚ್ಚಯ್ಯ ಸೇರಿದಂತೆ ಮಾಜಿ ಸಚಿವರು, ಮಾಜಿ ಶಾಸಕರು, ಕೆಪಿಸಿಸಿ ಮುಖಂಡರು. ಜಿ.ಪಂ ಮಾಜಿ ಪ್ರತಿನಿಧಿಗಳು, ಬ್ಲಾಕ್ ಅಧ್ಯಕ್ಷರುಗಳು, ವಿವಿಧ ಘಟಕಗಳ ಅಧ್ಯಕ್ಷರು, ಪಧಾದಿಕಾರಿಗಳು, ಸ್ಥಳೀಯ ಸಂಸ್ಥೆಗಳ ಹಾಲಿ ಮತ್ತು ಮಾಜಿ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತೆನ್ನೀರಾ ಮೈನಾ ತಿಳಿಸಿದ್ದಾರೆ.