ಮಡಿಕೇರಿ, ಆ. ೧೮: ನೂತನವಾಗಿ ಕೇಂದ್ರ ಸಚಿವರಾಗಿ ನೇಮಕಗೊಂಡು ಕೊಡಗು ಜಿಲ್ಲೆಗೆ ಆಗಮಿಸಿದ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಜಿಲ್ಲೆಯ ಜನಪ್ರತಿನಿಧಿಗಳು, ಬಿಜೆಪಿ ಪದಾಧಿ ಕಾರಿಗಳು ಜ. ತಿಮ್ಮಯ್ಯ ವೃತ್ತದಲ್ಲಿ ಭವ್ಯ ಸ್ವಾಗತದೊಂದಿಗೆ ಬರಮಾಡಿ ಕೊಂಡರು.

(ಮೊದಲ ಪುಟದಿಂದ) ಹೂಗುಚ್ಚ, ಹಾರ-ತುರಾಯಿಗಳೊಂದಿಗೆ ಸ್ವಾಗತಿಸಲಾಯಿತು. ಶಾಸಕ ಅಪ್ಪಚ್ಚು ರಂಜನ್ ಕೊಡಗಿನ ಸಾಂಪ್ರದಾಯಿಕ ಒಡಿಕತ್ತಿ ನೀಡಿ ಸ್ವಾಗತಿಸಿದರು.

ನಂತರ ಸಚಿವರು ವೀರ ಸೇನಾನಿಗಳಾದ ಜ. ತಿಮ್ಮಯ್ಯ, ಫೀ.ಮಾ. ಕೆ.ಎಂ. ಕಾರ್ಯಪ್ಪ, ಸ್ವಾತಂತ್ರö್ಯ ಹೋರಾಟಗಾರ ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಸನಿಹದಲ್ಲೇ ಇದ್ದ ಉದ್ಯಾನದಲ್ಲಿ ಸಚಿವರು ಗಿಡನೆಟ್ಟು ಪರಿಸರ ಕಾಳಜಿ ತೋರಿದರು. ಬಳಿಕ ಕ್ರಿಸ್ಟಲ್ ಕೋರ್ಟ್ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸಚಿವರಿಗೆ ಕೊಡಗಿನ ಸಾಂಪ್ರದಾಯಿಕ ಪೇಟ ತೊಡಿಸಿ ಒಡಿಕತ್ತಿ ನೀಡಿ ಗೌರವಿಸಲಾಯಿತು.