ಮಡಿಕೇರಿ, ಆ. ೧೯: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಇಂದಿರಾ ಗಾಂಧಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಮಡಿಕೇರಿ, ಆ. ೧೯: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಇಂದಿರಾ ಗಾಂಧಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಬದಲು ತೊಂದರೆ ನೀಡುತ್ತಿದೆ. ಕೇಂದ್ರದ ನಡೆಯನ್ನು ಕಾಂಗ್ರೆಸ್ ಮಹಿಳಾ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದರು.
ಎಂಎಲ್ಸಿ ವೀಣಾ ಅಚ್ಚಯ್ಯ ಮಾತನಾಡಿ, ಅಡುಗೆ ಅನಿಲದ ಬೆಲೆ ಗಗನಕ್ಕೇರಿದೆ. ದಿನದಿಂದ ದಿನಕ್ಕೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುತ್ತಿದ್ದರೂ ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ಜನಸಾಮಾನ್ಯರು ಅಡುಗೆ ಅನಿಲ ಖರೀದಿಸಲು ಸಾಧ್ಯವಾಗದೆ ಕಟ್ಟಿಗೆ ಉಪಯೋಗಿಸುವ ದಿನಗಳು ಬಂದಿರುವುದು ದುರಂತದ ವಿಚಾರ. ಮೋದಿ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿ ನಿಂದಲೂ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ೬೦ ರೂ ಇದ್ದ ಪೆಟ್ರೋಲ್ ದರ
(ಮೊದಲ ಪುಟದಿಂದ) ಇಂದು ೧೦೦ರ ಗಡಿ ದಾಟಿದ್ದು, ಶೋಚನೀಯ ಸ್ಥಿತಿ ಬಂದೊದಗಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಕೆಪಿಸಿಸಿ ಸಂವಹನ ವಕ್ತಾರ ಟಿ.ಪಿ. ರಮೇಶ್, ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ. ಶಾಹಿದ್, ಕೆಎಂಪಿಸಿ ರಾಜ್ಯ ಕಾರ್ಯದರ್ಶಿ ಅಪ್ಪಿ, ಮಾಜಿ ಸಚಿವೆ ಸುಮಾ ವಸಂತ್, ಜಿ.ಪಂ. ಮಾಜಿ ಅಧ್ಯಕ್ಷೆ ದೀರ್ಘಕೇಶಿ ಶಿವಣ್ಣ, ಬ್ಲಾಕ್ ಅಧ್ಯಕ್ಷರುಗಳಾದ ಮೀನಾಕ್ಷಿ ಕೇಶವ, ಕೋಳೇರ ಭಾರತಿ ಪೊನ್ನಕ್ಕಿ, ರಾಜೇಶ್ವರಿ, ಸುನಿತಾ ಮಂಜುನಾಥ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ, ನಗರ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರ ಮಹಿಳಾ ಘಟಕದ ಅಧ್ಯಕ್ಷೆ ಫ್ಯಾನ್ಸಿ ಪಾರ್ವತಿ ಹಾಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.