ಮಡಿಕೇರಿ, ಆ. ೧೯: ಕೊಡಗು ಜಿಲ್ಲಾ ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಜಂಟಿ ಆಶ್ರಯದಲ್ಲಿ ತಾ. ೨೦ ರಂದು (ಇಂದು) ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ. ದೇವರಾಜ ಅರಸು ಅವರ ೧೦೬ನೇ ಜನ್ಮ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಅಪರಾಹ್ನ ೨.೩೦ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿ ಸಚಿವ ಎಂ.ಸಿ. ನಾಣಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ. ಮುದ್ದಯ್ಯ ವಹಿಸಲಿದ್ದಾರೆ.

ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ. ರಮೇಶ್ ಪ್ರಸ್ತಾವಿಕ ನುಡಿಗಳನ್ನಾಡಲಿದ್ದು, ಕರ್ನಾಟಕ ಸರಕಾರದ ಮಾಜಿ ಅಭಿಯೋಜಕರು ಹಾಗೂ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಹೆಚ್.ಎಸ್. ಚಂದ್ರಮೌಳಿ "ಮೀಸಲಾತಿ ಮತ್ತು ಸಾಮಾಜಿಕ ನ್ಯಾಯ" ಎಂಬ ವಿಷಯದ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಎ.ಎಸ್. ಪೊನ್ನಣ್ಣ "ಹಿಂದುಳಿದ ವರ್ಗಗಳ ಅಭ್ಯುದಯಕ್ಕೆ ಇರುವ ಕಾನೂನಿಕ ತೊಡಕಗಳು" ವಿಷಯ ಮಂಡಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಕಾರ್ಮಿಕ ನಾಯಕ ಭರತ್, ಗಾಯಕ ಎಂ.ಎA. ಲಿಯಾಖತ್ ಆಲಿ ಮತ್ತು ಸಮಾಜ ಸೇವಕ ಹಾಗೂ ಡಿಎಸ್‌ಎಸ್ ಅಧ್ಯಕ್ಷ ಹೆಚ್.ಎಲ್. ದಿವಾಕರ್ ಅವರನ್ನು ಸನ್ಮಾನಿಸಲಾಗುವುದು.