ಕುಶಾಲನಗರ, ಆ. ೧೯: ಜಿಲ್ಲೆಯಲ್ಲಿ ಈ ವಾರ ಕೂಡ ವಾರಾಂತ್ಯ ಕರ್ಫ್ಯೂ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಈ ಬಗ್ಗೆ ಆದೇಶ ಹೊರಡಿಸಿರುವ ಅವರು, ಕೇರಳ ಮತ್ತು ಮಹಾರಾಷ್ಟç ರಾಜ್ಯಗಳಲ್ಲಿ ಕೋವಿಡ್-೧೯ ಸೋಂಕು ಹೆಚ್ಚುತ್ತಿದ್ದು, ಕೋವಿಡ್-೧೯ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಸರಕಾರದ ನಿರ್ದೇಶನದಂತೆ ಪ್ರತಿ ದಿನ ರಾತ್ರಿ ೯ ಗಂಟೆಯಿAದ ಮರುದಿನ ಬೆಳಗ್ಗೆ ೫ ಗಂಟೆಯವರೆಗೆ ರಾತ್ರಿ ಕರ್ಫ್ಯೂ ಮತ್ತು ಶುಕ್ರವಾರ ರಾತ್ರಿ ೯ ಗಂಟೆಯಿAದ ಸೋಮವಾರ ಬೆಳಗ್ಗೆ ೫ ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿರುತ್ತದೆ. ಈ ಆದೇಶವು ತಾ. ೩೦ರ ಬೆಳಿಗ್ಗೆ ೬ ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ರಾತ್ರಿ ಕರ್ಫ್ಯೂ ಅವಧಿಯಲ್ಲಿ ತುರ್ತು, ಅತ್ಯವಶ್ಯಕ, ವೈದ್ಯಕೀಯ ಮತ್ತು ಕೋವಿಡ್ ಕರ್ತವ್ಯದಲ್ಲಿ ತೊಡಗಿರುವ ಸೇವೆಗಳಿಗೆ ಮಾತ್ರ ಅವಕಾಶ ಇರುತ್ತದೆ.
(ಮೊದಲ ಪುಟದಿಂದ) ವೈದ್ಯಕೀಯ ಸೇವೆಯ ಸಂಬAಧ ರೋಗಿಯೊಂದಿಗೆ ರೋಗಿಯ ಉಪಚಾರಕರ ಓಡಾಟಕ್ಕೆ ಅಡ್ಡಿ ಇರುವುದಿಲ್ಲ. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುತ್ತಾ, ಆಹಾರ, ದಿನಸಿ, ಹಣ್ಣು ಮತ್ತು ತರಕಾರಿ, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್ಗಳು, ಪಶು ಆಹಾರ ಮಳಿಗೆಗಳು, ಬೀದಿ ಬದಿ ವ್ಯಾಪಾರಿಗಳಿಗೆ, ಪಡಿತರ ನ್ಯಾಯಬೆಲೆ ಮಳಿಗೆ, ಸ್ಟಾಂಡ್ ಅಲೋನ್ ಮದ್ಯ ಮಾರಾಟ ಮಳಿಗೆ ( ಟೇಕ್ ಅವೇ ರೂಪದಲ್ಲಿ) ಬೆಳಗ್ಗೆ ೫ ಗಂಟೆಯಿAದ ಮಧ್ಯಾಹ್ನ ೨ ಗಂಟೆಯವರೆಗೆ ಕಾರ್ಯಾಚರಿಸಲು ಅವಕಾಶ ಇರುತ್ತದೆ.
ಬಸ್ ನಿಲ್ದಾಣಗಳಿಂದ ಪ್ರಯಾಣಿಕರನ್ನು ಕರೆತರಲು, ಕರೆದೊಯ್ಯಲು ಸಾರ್ವಜನಿಕ ಸಾರಿಗೆ, ಖಾಸಗಿ ಸಾರಿಗೆ ಮತ್ತು ಟ್ಯಾಕ್ಸಿಗಳಿಗೆ ಅನುಮತಿಸಿದೆ. ಆದಾಗ್ಯೂ ಪ್ರಯಾಣಿಕರು ಅಧಿಕೃತ ಟಿಕೆಟ್ನ್ನು ಹೊಂದಿರತಕ್ಕದ್ದು ಮತ್ತು ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸತಕ್ಕದ್ದು.
ಜಿಲ್ಲೆಯಲ್ಲಿ ತಾ.೨೨ ರ ಭಾನುವಾರದಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಹಾಗೂ ತಾ.೨೮ ಮತ್ತು ೨೯ ರಂದು ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿರುತ್ತದೆ. ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು, ಅಭ್ಯರ್ಥಿಗಳು ಸಂಚಾರದ ವೇಳೆ ಪರೀಕ್ಷೆಯ ಪ್ರವೇಶ ಪತ್ರವನ್ನು ಹೊಂದಿದ್ದು, ತಪಾಸಣೆ ಸಮಯದಲ್ಲಿ ಹಾಜರುಪಡಿಸುವುದು.
ಕೇರಳ ರಾಜ್ಯದಿಂದ ಆಗಮಿಸುವ ಕೋವಿಡ್ ಲಸಿಕೆ ಪಡೆದಿದ್ದರೂ (೨ ಡೋಸ್ ಆಗಿದ್ದರೂ) ಕಡ್ಡಾಯವಾಗಿ ೭೨ ಗಂಟೆಗಳ ಒಳಗಾಗಿ ಪಡೆದಿರುವ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಯ ನೆಗೆಟಿವ್ ವರದಿಯನ್ನು ಹೊಂದಿರತಕ್ಕದ್ದು ಎಂದು ತಿಳಿಸಿದ್ದಾರೆ.