ಸೋಮವಾರಪೇಟೆ, ಆ. ೧೯: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾ. ೨೨ ರಂದು ಬೆಳಿಗ್ಗೆ ೧೧ ಗಂಟೆಗೆ ಬೇಳೂರಿನ ಮುರುಘರಾಜೇಂದ್ರ ಮಠದ ಆವರಣದಲ್ಲಿ ತಾಲೂಕು ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ನಡೆಯಲಿದೆ.

ಕವಿಗೋಷ್ಠಿಯಲ್ಲಿ ಭಾಗವಹಿಸುವವರು ತಾ. ೨೧ರಂದು ಮಧ್ಯಾಹ್ನ ೨ ಗಂಟೆಯೊಳಗೆ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿ ಮತ್ತು ನೋಂದಾವಣೆಗಾಗಿ ಮೊಬೈಲ್ ಸಂಖ್ಯೆ. ೯೪೮೦೯೯೫೭೩೯ ಸಂಪರ್ಕಿಸಬೇಕೆAದು ತಾಲೂಕು ಘಟಕದ ಅಧ್ಯಕ್ಷ ಎಚ್.ಜೆ. ಜವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.