ಮಡಿಕೇರಿ, ಆ. ೨೦: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶತಮಾನೋತ್ಸವ ಕಟ್ಟಡದ ಶಂಕು ಸ್ಥಾಪನೆ ಕಾರ್ಯಕ್ರಮ ಇಂದು ನೆರವೇರಿತು. ಬ್ಯಾಂಕಿನ ಕೇಂದ್ರ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಶಂಕು ಸ್ಥಾಪನೆ ನೆರವೇರಿಸಿದರು. ರೂ. ೭ ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ಹಾಗೂ ಒಳಾಂಗಣ ಅಭಿವೃದ್ಧಿಪಡಿಸುವ ಯೋಜನೆ ಇದಾಗಿದೆ.

ಇದೇ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್‌ನ ಸಂಚಾರಿ ಬ್ಯಾಂಕ್ ವಾಹನಕ್ಕೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಬ್ಯಾಂಕ್‌ನ ಅಧ್ಯಕ್ಷ ಬಾಂಡ್ ಗಣಪತಿ, ಉಪಾಧ್ಯಕ್ಷ ಹರೀಶ್ ಪೂವಯ್ಯ, ಬ್ಯಾಂಕ್‌ನ ನಿರ್ದೇಶಕರುಗಳು, ಸಿಬ್ಬಂದಿಗಳು ಹಾಜರಿದ್ದರು.