ಮಡಿಕೇರಿ, ಆ. ೨೨: ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಸಭೆಯನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಕಾಂಗ್ರೆಸ್ ಪಕ್ಷವನ್ನು ಬಲ ಯುತವಾಗಿ ಕಟ್ಟಲು ಮಹಿಳೆಯರು ಶ್ರಮ ವಹಿಸಬೇಕೆಂದು ತಿಳಿಸಿದರು. ಪ್ರಸ್ತುತ ಪಕ್ಷ ಸಂಘಟನೆಗೆ ಮಾಹಿತಿ ತಂತ್ರಜ್ಞಾನ ಮತ್ತು ಸಾಮಾಜಿಕ ಜಾಲತಾಣದ ಸಹಕಾರವಿದ್ದು, ವಲಯ ಮಟ್ಟದಿಂದ ಜಿಲ್ಲಾ ಮಟ್ಟದ ವರೆಗೆ ಮಹಿಳಾ ನಾಯಕಿಯರು ಇತರ ನಾಯಕರುಗಳ ಸಲಹೆ, ಸೂಚನೆಗಳನ್ನು ಪಡೆದು ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಮಹಿಳಾ ಕಾಂಗ್ರೆಸ್ನಲ್ಲಿ ಸ್ತಿçÃಜಾಗೃತಿ ಶಕ್ತಿಯನ್ನು ಬೆಳೆಸಲು ಮಹಿಳಾ ಸಂಘಟನೆಗಳನ್ನು ಅವಲಂಬಿಸ ಬೇಕಾಗಿದೆ ಎಂದರು. ಮುಂಬರುವ ಜಿ.ಪಂ ಮತ್ತು ತಾ.ಪಂ ಚುನಾವಣೆ ಗಳಿಗೆ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕಾಗಿದೆ. ಪ್ರತಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಿತಿಗಳು ಪ್ರವಾಸ ಮಾಡಿ ಕಾರ್ಯಕರ್ತರ ಪಡೆ ಕಟ್ಟಬೇಕೆಂದರು.
ಮಾಜಿ ಸಚಿವೆ ಸುಮಾವಸಂತ್ ಮಾತನಾಡಿ, ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಮತ್ತು ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ಕೆಪಿಸಿಸಿ ಮಹಿಳಾ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಅಪ್ಪಿ ಮಾತನಾಡಿ, ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಹಿಳೆಯ ರನ್ನು ಕಾಂಗ್ರೆಸ್ ಗುರುತಿಸಿ ಬೆಳೆಸಬೇಕೆಂದರು. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿ ಗಳನ್ನು ಗೆಲ್ಲಿಸುವ ಜವಾಬ್ದಾರಿ ಮಹಿಳಾ ಕಾಂಗ್ರೆಸ್ ಮೇಲಿದೆ ಎಂದು ತಿಳಿಸಿದರು.
ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ ಟಿ.ಪಿ. ರಮೇಶ್ ಮಾತನಾಡಿ, ಸಂಘಟನೆಯ ಕೊರತೆ ಪಕ್ಷದ ಸೋಲಿಗೆ ಮೂಲ ಕಾರಣ ಮತ್ತು ಕಾಂಗ್ರೆಸ್ ಮಹಿಳಾ ಸಮಿತಿಗಳು ಪ್ರವಾಸ ಮಾಡಿ ಕಾರ್ಯಕರ್ತರ ಪಡೆ ಕಟ್ಟಬೇಕೆಂದರು.
ಮಾಜಿ ಸಚಿವೆ ಸುಮಾವಸಂತ್ ಮಾತನಾಡಿ, ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಮತ್ತು ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ಕೆಪಿಸಿಸಿ ಮಹಿಳಾ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಅಪ್ಪಿ ಮಾತನಾಡಿ, ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಹಿಳೆಯ ರನ್ನು ಕಾಂಗ್ರೆಸ್ ಗುರುತಿಸಿ ಬೆಳೆಸಬೇಕೆಂದರು. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿ ಗಳನ್ನು ಗೆಲ್ಲಿಸುವ ಜವಾಬ್ದಾರಿ ಮಹಿಳಾ ಕಾಂಗ್ರೆಸ್ ಮೇಲಿದೆ ಎಂದು ತಿಳಿಸಿದರು.
ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ ಟಿ.ಪಿ. ರಮೇಶ್ ಮಾತನಾಡಿ, ಸಂಘಟನೆಯ ಕೊರತೆ ಪಕ್ಷದ ಸೋಲಿಗೆ ಮೂಲ ಕಾರಣ ಮತ್ತು ಅಭಿನಂದನಾರ್ಹರು ಎಂದರು. ಮುಂದಿನ ಜಿ.ಪಂ. ಹಾಗೂ ತಾ.ಪಂ ಚುನಾವಣೆಯನ್ನು ಮಹಿಳಾ ನಾಯಕಿಯರು ಸವಾಲಾಗಿ ಸ್ವೀಕರಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮ ವಹಿಸಬೇಕೆಂದು ತಿಳಿಸಿದರು.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ಟಿ.ಎಂ. ಶಾಹಿದ್ ಮಾತನಾಡಿ, ಎಲ್ಲರೂ ಒಗ್ಗಟ್ಟಿನಿಂದ ಸಂಘಟಿತರಾಗಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಧರ್ಮಜ ಉತ್ತಪ್ಪ, ವೀಣಾ ಅಚ್ಚಯ್ಯ, ಮಾಜಿ ಸಚಿವೆ ಸುಮಾ ವಸಂತ್, ಕೆಪಿಸಿಸಿ ವೀಕ್ಷಕಿ ಅಪ್ಪಿ, ಟಿ.ಪಿ. ರಮೇಶ್, ಟಿ.ಎಂ. ಶಾಹಿದ್, ದೀರ್ಘಕೇಶಿ ಶಿವಣ್ಣ ಅವರುಗಳನ್ನು ಸನ್ಮಾನಿಸ ಲಾಯಿತು. ಈ ಸಂದರ್ಭ ಮಹಿಳಾ ಕಾಂಗ್ರೆಸ್ ವತಿಯಿಂದ ಪಕ್ಷದ ನಾಯಕರುಗಳಿಗೆ ರಕ್ಷಾಬಂಧನ ಮಾಡುವ ಮೂಲಕ ಭ್ರಾತೃತ್ವದ ಸಂದೇಶ ಸಾರಲಾಯಿತು.
ಸಭೆಯಲ್ಲಿ ಮಡಿಕೇರಿ ಮತ್ತು ಪೊನ್ನಂಪೇಟೆ ಬ್ಲಾಕ್ನಲ್ಲಿ ಬಿಜೆಪಿ ತೊರೆದ ಬಿನಿತ, ರಶ್ಮಿ ಹಾಗೂ ಅನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕುಶಾಲನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುನೀತಾ ಮಂಜುನಾಥ್ ಸ್ವಾಗತಿಸಿದರು. ಪೊನ್ನಂಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾರತಿ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್ ವಂದಿಸಿದರು.
ಸಭೆಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಗ್ರಾ.ಪಂ ಸದಸ್ಯೆ ಫಿಲೋಮಿನಾ, ನಗರಸಭೆ ಮಾಜಿ ಅಧ್ಯಕ್ಷರುಗಳಾದ ಕಾವೇರಮ್ಮ ಸೋಮಣ್ಣ, ಜುಲೇಕಾಬಿ, ಜಿ.ಪಂ ಮಾಜಿ ಉಪಾಧ್ಯಕ್ಷೆ ಕಾವೇರಿ, ಮಾಜಿ ಸದಸ್ಯರುಗಳಾದ ಶ್ರೀಶ ಅಚ್ಚುತನ್, ಬಿ.ಎನ್. ಪ್ರಥ್ಯು, ವಿವಿಧ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷರುಗಳು, ಪ್ರಮುಖರು ಭಾಗವಹಿಸಿದ್ದರು.
ಕಾಂಗ್ರೆಸ್ ಸೇವಾದಳದ ಕಾರ್ಯಕರ್ತರು ವಂದೇ ಮಾತರಂ ಹಾಗೂ ರಾಷ್ಟçಗೀತೆಯನ್ನು ಹಾಡಿದರು.