ಮಡಿಕೇರಿ, ಆ. ೨೧: ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್ಥಿಕ ಸಂಕಷ್ಟದಲ್ಲಿರುವ ಪತ್ರಕರ್ತರ ಮಕ್ಕಳು, ೮ನೇ ತರಗತಿಯಿಂದ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡುತ್ತಿರುವವರಿಗೆ ಶಿಕ್ಷಣಕ್ಕೆ ಆರ್ಥಿಕ ಸಹಾಯ ನೀಡಲು ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿರ್ಧರಿಸಿದೆ. ಆಸಕ್ತರು ಮತ್ತು ಅರ್ಹರು ತಮ್ಮ ವಿದ್ಯಾಭ್ಯಾಸಕ್ಕೆ ಸಂಬAಧಪಟ್ಟ ಅಗತ್ಯ ದಾಖಲೆ(ಅಂಕಪಟ್ಟಿ-ಶಾಲೆಗೆ ಪಾವತಿಸಿದ ಶುಲ್ಕದ ನಕಲು ಪ್ರತಿ)ಗಳೊಂದಿಗೆ ಅರ್ಜಿಯನ್ನು ಸೆಪ್ಟೆಂಬರ್ ೧೫ ರೊಳಗಾಗಿ ಕೊಡಗು ಪತ್ರಿಕಾ ಭವನ ಟ್ರಸ್ಟ್ಗೆ ಸಲ್ಲಿಸಿದರೆ, ಅರ್ಜಿಯನ್ನು ಪರಿಶೀಲಿಸಿ ಅರ್ಹರಿಗೆ ಆರ್ಥಿಕ ಸಹಾಯವನ್ನು ನೀಡಲಾಗುವುದೆಂದು ಪತ್ರಿಕಾ ಪ್ರಕಟಣೆಯಲ್ಲಿ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ತಿಳಿಸಿದ್ದಾರೆ.