ಸಿದ್ದಾಪುರ, ಆ. ೨೨: ನೆಲ್ಲಿಹುದಿಕೇರಿಯ ಸಂತ್ರಸ್ತ ಕುಟುಂಬಗಳಿಗೆ ಪುನರ್ವಸತಿಗೆ ಗುರುತಿಸಿ ನಿವೇಶನ ಹಂಚಿಕೆ ಮಾಡಿರುವ ಜಾಗದಲ್ಲಿ ಕಿರು ಸೇತುವೆ ನಿರ್ಮಿಸಬೇಕೆಂದು ಒತ್ತಾಯಿಸಿ, ತಾ. ೩೧ರಂದು ಅದೇ ಜಾಗದಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ಸಂತ್ರಸ್ತರ ಹೋರಾಟ ಸಮಿತಿಯ ಮುಖಂಡ ಪಿ.ಆರ್. ಭರತ್ ತಿಳಿಸಿದ್ದಾರೆ.

ಅರೆಕಾಡುವಿನಲ್ಲಿ ಸಂತ್ರಸ್ತರಿಗೆ ಜಿಲ್ಲಾಡಳಿತ ವತಿಯಿಂದ ನಿವೇಶನ ಗುರುತಿಸಿ ಹಂಚಿಕೆ ಮಾಡುವ ಈ ಜಾಗದಲ್ಲಿ ಕೂಡಲೇ ಕಿರುಸೇತುವೆ ನಿರ್ಮಾಣ ಮಾಡಿ ಕಾಮಗಾರಿ ಆರಂಭಿಸಿ ಪುನರ್ವಸತಿ ನಿರ್ಮಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಭರತ್ ತಿಳಿಸಿದ್ದಾರೆ.