ಸೋಮವಾರಪೇಟೆ, ಆ. ೨೧: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಪ್ರಗತಿಯಲ್ಲಿರುವ ರೂ.೨೦ ಕೋಟಿ ವೆಚ್ಚದ ಅಂಬೇಡ್ಕರ್ ವಸತಿ ಶಾಲೆ ಕಾಮಗಾರಿಯನ್ನು ಈ ವರ್ಷದ ಡಿಸೆಂಬರ್ನೊಳಗೆ ಪೂರ್ಣ ಗೊಳಿಸಲು ಸಂಬAಧಿಸಿದ ಅಭಿಯಂತರರಿಗೆ ಸೂಚಿಸ ಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಪಟ್ಟಣದಲ್ಲಿರುವ ಅಂಬೇಡ್ಕರ್ ವಸತಿ ಶಾಲಾ ಆವರಣದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ವಸತಿ ಶಾಲೆಗಾಗಿ ತೋಳೂರು ಶೆಟ್ಟಳ್ಳಿ ಗ್ರಾಮದಲ್ಲಿ ೨೦ ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ಎಲ್ಲಾ ಸೌಕರ್ಯದೊಂದಿಗೆ ಹೊಸ ಕಟ್ಟಡದಲ್ಲಿ ಶಾಲೆ ಪ್ರಾರಂಭವಾಗಲಿದೆ ಎಂದರು. ಅಂಬೇಡ್ಕರ್ ವಸತಿ ಶಾಲೆಯನ್ನು ಬೇರೆಡೆಗೆ ಸ್ಥಳಾಂತರಿಸಲು ಇಲಾಖೆಯ ಕೆಲ ಅಧಿಕಾರಿಗಳು ಹಾಗೂ ಹಿಂದಿನ ಪ್ರಾಂಶುಪಾಲರು ಮುಂದಾಗಿದ್ದರು. ಅದನ್ನು ತಪ್ಪಿಸಿ ಸೋಮವಾರ ಪೇಟೆಯಲ್ಲೇ ಅಂಬೇಡ್ಕರ್ ವಸತಿ ಶಾಲೆಯನ್ನು ಉಳಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸುಸಜ್ಜಿತ ಕಟ್ಟಡಕ್ಕೆ ಶಾಲೆ ಸ್ಥಳಾಂತರಗೊಳ್ಳಲಿದೆ ಎಂದು ಶಾಸಕರು ತಿಳಿಸಿದರು.
ಜಾತೀಯತೆ ಎಂಬುದು ಸಮಾಜಕ್ಕೆ ಅಂಟಿರುವ ದೊಡ್ಡ ಪಿಡುಗಾಗಿದೆ. ಇದನ್ನು ಹೋಗಲಾಡಿ ಸಬೇಕಾದರೆ ವಿದ್ಯಾರ್ಥಿ ಜೀವನ ದಿಂದಲೇ ಮಕ್ಕಳಲ್ಲಿ ಜಾತ್ಯತೀತ ಮನೋಭಾವನೆ ಬೆಳೆಸಬೇಕು. ಇಂತಹ ವಸತಿ ಶಾಲೆಗಳಲ್ಲಿ ಸಾಮಾನ್ಯ ವರ್ಗದ ಮಕ್ಕಳಿಗೂ ಕೂಡ ಸ್ಥಾನ ಕಲ್ಪಿಸುವದರಿಂದ ಜಾತೀಯ ಭಾವನೆ ದೂರವಾಗಿ ಎಲ್ಲರೂ ಒಂದೇ ಎಂಬ ಸಮಾನ ಭಾವ ಮೂಡಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಿಸಿದರು.
ಕೊರೊನಾ ಸಂಕಷ್ಟದಲ್ಲಿ ಎಲ್ಲಾ ಜನರು ಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಜನತೆಯ ಸಂಕಷ್ಟಕ್ಕೆ ಸ್ಪಂದಿಸುತ್ತಿದೆ. ಈ ಹಿನೆÀ್ನಲೆಯಲ್ಲಿ ವಸತಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್ಗಳನ್ನು ವಿತರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ೧೩೦ ವಿದ್ಯಾರ್ಥಿಗಳ ಕುಟುಂಬಕ್ಕೆ ದಿನಸಿ ಸಾಮಗ್ರಿಗಳ ಕಿಟ್ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ವಸತಿ ಶಾಲೆಯ ಪ್ರಾಂಶುಪಾಲ ಲೋಕೇಶ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್.ಮಹೇಶ್, ಪೋಷಕ ಸಮಿತಿಯ ಮಹೇಶ್, ಚನ್ನಯ್ಯ, ವೀರಭದ್ರಶೆಟ್ಟಿ, ಉಪನ್ಯಾಸಕ ಶಬರಿಗಿರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.