ಕರಿಕೆ, ಆ. ೨೨: ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲೊಂದಾದ ಭಾಗಮಂಡಲ - ಕರಿಕೆ - ಪಾಣತ್ತೂರು ಅಂತರರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ಕರಿಕೆ ಮೂಲಕ ಹಾದುಹೋಗುವ ರಸ್ತೆ ಸುಮಾರು ಮೂರರಿಂದ ನಾಲ್ಕು ಕಿ.ಮೀ. ಡಾಂಬರ್ ಸಂಪೂರ್ಣ ಕಿತ್ತು ಹೋಗಿದ್ದು, ರಸ್ತೆ ಬೃಹತ್ ಗುಂಡಿಗಳಿAದ ಕೂಡಿದೆ. ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ಸಮಸ್ಯೆ ಉಂಟಾಗಿದೆ. ಈ ಹಿಂದೆಯೇ ಲೋಕೋಪಯೋಗಿ ಇಲಾಖೆ ವತಿಯಿಂದ ಮರು ಡಾಂಬರೀಕರಣಕ್ಕೆ ಟೆಂಡರ್ ಆಗಿ ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಪೂರ್ಣಗೊಳ್ಳದಿರುವುದು ಲೋಕೋಪಯೋಗಿ ಇಲಾಖೆಯ ಕಾರ್ಯವೈಖರಿಗೆ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ಈ ರಸ್ತೆಯ ಪರಿಸ್ಥಿತಿಯ ಬಗ್ಗೆ ಅರಿವಿದ್ದ ಕಾರಣ ವಿಶೇಷ ಆಸಕ್ತಿ ವಹಿಸಿ ಸರಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸುವ ಪ್ರಯತ್ನ ಮಾಡಿದ್ದರು. ಅಲ್ಲದೇ ಈ ರಸ್ತೆ ಅಭಿವೃದ್ಧಿಗೆ ಅನುದಾನ ಕೂಡ ಬಿಡುಗಡೆ ಮಾಡಿದ್ದರು. ಅಂತರರಾಜ್ಯ ಹೆದ್ದಾರಿಯಾಗಿ ಮಾರ್ಪಡಿಸಲು ಕೇಂದ್ರ ಹೆದ್ದಾರಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಬಗ್ಗೆ ಕೇರಳದ ಮುಖ್ಯಮಂತ್ರಿ ಮತ್ತು ಕಾಸರಗೋಡಿನ ಸಂಸದರ ನಿಯೋಗ ಕೇಂದ್ರ ಸಚಿವ ನಿತಿನ್ ಗಡ್ಕÀರಿಯವರನ್ನು ಭೇಟಿಮಾಡಿ ಭಾರತ್ ಮಾಲ ಯೋಜನೆಯಡಿ ಕಾಂಜAಗಾಡ್- ಪಾಣತ್ತೂರು- ಕರಿಕೆ- ಭಾಗಮಂಡಲ-ಮಡಿಕೇರಿ ರಾಷ್ಟಿçÃಯ ಹೆದ್ದಾರಿಯಾಗಿ ಅಭಿವೃದ್ಧಿಪಡಿಸಲು ಮನವಿ ಸಲಿಸ್ಲಿದ್ದರು. ಆದರೆ ಹದಗೆಟ್ಟಿರುವ ರಸ್ತೆ ದುರಸ್ತಿಗೆ ಟೆಂಡರ್ ಆಗಿದ್ದರೂ ಕೆಲಸ ಪೂರ್ಣಗೊಳ್ಳದ ಬಗ್ಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸುತ್ತಾ ಕೂಡಲೇ ಇಲಾಖೆ ಎಚ್ಚೆತ್ತು ರಸ್ತೆ ದುರಸ್ತಿಪಡಿಸಲು ಕ್ರಮ ಕೈಗೊಳ್ಳಬೇಕಿದೆ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. -ಸುಧೀರ್ ಹೊದ್ದೆಟ್ಟಿ