ಮಡಿಕೇರಿ, ಆ. ೨೩: ವೀರಾಜಪೇಟೆ ಅರಣ್ಯ ವಲಯ ವ್ಯಾಪ್ತಿಗೆ ಬರುವ ಗ್ರಾಮಗಳಾದ ಪಾಲಂಗಾಲ, ಕೆದಮುಳ್ಳೂರು, ಕರಡ, ಪೊದವಾಡ, ನರಿಯಂದಡ ಗ್ರಾಮಗಳಲ್ಲಿ ತಾ. ೨೪ ರಂದು (ಇಂದು) ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ಹಮ್ಮಿಕೊಂಡಿದ್ದು, ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ವಲಯ ಅರಣ್ಯಾಧಿಕಾರಿ ಕೆ.ಎಂ. ದೇವಯ್ಯ ಪ್ರಕಟಣೆಯಲ್ಲಿ ಕೋರಿಕೊಂಡಿದ್ದಾರೆ.