ಮಡಿಕೇರಿ, ಆ.೨೩: ಎಂಜಿನಿಯರಿAಗ್ ಮತ್ತು ಕೃಷಿ ಮತ್ತು ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಹೀಗೆ ಹಲವು ವೃತ್ತಿಪರ ಕೋರ್ಸ್ಗಳಿಗೆ ಸಂಬAಧಿಸಿದAತೆ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿ.ಇ.ಟಿ) ಇದೇ ತಾ. ೨೮ ಮತ್ತು ೨೯ ರಂದು ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವಿಷ್ಣುಮೂರ್ತಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ೧೧೨೮ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ೫೨೮ ವಿದ್ಯಾರ್ಥಿಗಳು, ಸೋಮವಾರಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ೨೧೬ ಮತ್ತು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ೩೮೪ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ಹೇಳಿದರು. ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆಸಲು ಕಾಲೇಜುಗಳ ಪ್ರಾಂಶುಪಾಲರನ್ನು ಮಾರ್ಗಾಧಿಕಾರಿಗಳನ್ನಾಗಿ ಪರೀಕ್ಷಾ ಕೇಂದ್ರಗಳಿಗೆ ಕಸ್ಟೋಡಿಯನ್ ಜಾಗೃತಿ ದಳದ ಸದಸ್ಯರನ್ನಾಗಿ ನಿಯೋಜಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ.