ರಾಷ್ಟಿçÃಯ ನಗದೀಕರಣ ಯೋಜನೆ ಘೋಷಿಸಿದ ಕೇಂದ್ರ

ನವದೆಹಲಿ, ಆ. ೨೩: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ‘ರಾಷ್ಟಿçÃಯ ನಗದೀಕರಣ ಯೋಜನೆ’(ಎನ್‌ಎಂಪಿ) ಘೋಷಿಸಿದ್ದಾರೆ. ೬ ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂಲಸೌಕರ್ಯಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದ್ದು. ಈ ಪಟ್ಟಿಯಲ್ಲಿ ಪ್ರಮುಖವಾಗಿ ರಸ್ತೆಗಳು, ರೈಲ್ವೆ ಹಾಗೂ ವಿದ್ಯುತ್ ಗ್ರಿಡ್‌ಗಳೂ ಸೇರಿವೆ. ಆದರೆ ಭೂಮಿ ಮಾರಾಟ ಈ ಪಟ್ಟಿಯಲ್ಲಿ ಸೇರಿಲ್ಲ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರವು ರಾಷ್ಟಿçÃಯ ನಗದೀಕರಣ ಯೋಜನೆ ಅಡಿ ೨೦೨೨ರ ಹಣಕಾಸು ವರ್ಷದಿಂದ ೨೦೨೫ ರ ಹಣಕಾಸು ವರ್ಷದವರೆಗೆ ಮುಂದಿನ ನಾಲ್ಕು ವರ್ಷಗಳಲ್ಲಿ ಮೂಲಸೌಕರ್ಯ ಆಸ್ತಿಗಳನ್ನು ಮಾರಾಟ ಮಾಡಲಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ. ಎನ್‌ಎಂಪಿ ಸರ್ಕಾರದ ಬ್ರೌನ್ಫೀಲ್ಡ್ ಮೂಲಸೌಕರ್ಯ ಸ್ವತ್ತುಗಳ ನಾಲ್ಕು ವರ್ಷಗಳ ಪೈಪ್‌ಲೈನ್ ಅನ್ನು ಒಳಗೊಂಡಿದೆ. ಕೇಂದ್ರ ಬಜೆಟ್ ೨೦೨೧-೨೨ ರಲ್ಲಿ, ಸರ್ಕಾರವು ಮೂಲಸೌಕರ್ಯಕ್ಕಾಗಿ ನವೀನ ಮತ್ತು ಪರ್ಯಾಯ ಹಣಕಾಸು ಸಂಗ್ರಹಿಸುವ ಸಾಧನವಾಗಿ ಆಸ್ತಿ ಗಳಿಕೆಯ ಮೇಲೆ ಹೆಚ್ಚಿನ ಒತ್ತು ನೀಡಿತು ಮತ್ತು ಹಲವಾರು ಪ್ರಮುಖ ಘೋಷಣೆಗಳನ್ನು ಒಳಗೊಂಡಿದೆ. ರಾಷ್ಟಿçÃಯ ನಗದೀಕರಣ ಪೈಪ್‌ಲೈನ್ ಅನ್ನು ಯಶಸ್ವಿಯಾಗಿಸಲು ನಾವು ಸಂಪೂರ್ಣವಾಗಿ ಬದ್ಧರಾಗಿದ್ದೇವೆ. ಉತ್ತಮ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಖಾಸಗಿ ವಲಯಕ್ಕೆ ಪ್ರವೇಶಿಸುವುದು ಬಹಳ ಮುಖ್ಯ ಎಂದು ನಾವು ಭಾವಿಸುತ್ತೇವೆ. ಮತ್ತು ಅದಕ್ಕಾಗಿ ನಾವು ಕಷ್ಟಪಟ್ಟು ಕೆಲಸ ಮಾಡಲು ಬದ್ಧರಾಗಿದ್ದೇವೆ. ಎಂದು ಇದೇ ಸಂದರ್ಭದಲ್ಲಿ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಹೇಳಿದ್ದಾರೆ.

ಇಬ್ಬರು ಉಗ್ರರು ಹತ

ಶ್ರೀನಗರ, ಆ. ೨೩: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಲೂಚಿ ಬಾಗ್ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಶ್ರೀನಗರ ನಗರದಲ್ಲಿ ಜೆಕೆಪಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಹತ್ಯೆಗೀಡಾದವರನ್ನು ಲಷ್ಕರ್-ಇ-ತೊಯ್ಬಾ ಸಂಘಟನೆಯ ಉನ್ನತ ಕಮಾಂಡರ್‌ಗಳೆAದು ಗುರುತಿಸಲಾಗಿದೆ. ಅಬ್ಬಾಸ್ ಶೇಖ್ ಮತ್ತು ಆತನ ಎರಡನೇ ಕಮಾಂಡ್ ಸಕೀಬ್ ಮಂಜೂರ್ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಕಾರ್ಮಿಕರು ಸಜೀವ ದಹನ

ಬೆಂಗಳೂರು, ಆ. ೨೩: ಎಂಎA ಫುಡ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿ ಇಬ್ಬರೂ ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಮಾಗಡಿ ರಸ್ತೆಯಲ್ಲಿರುವ ಗೋಪಾಲಪುರ ಬಳಿ ನಡೆದಿದೆ. ಬಿಹಾರ ಮೂಲದ ಸೌರಭ್ ಹಾಗೂ ಮನೀಶ್ ಮೃತ ಕಾರ್ಮಿಕರು. ಶಾಂತಿ, ಮನೀಷ್ ಸೇರಿ ನಾಲ್ವರು ಗಾಯಗೊಂಡಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ಹೇಳಿವೆ. ಸೋಮವಾರ ಮಧ್ಯಾಹ್ನ ೧.೪೫ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಆಕಸ್ಮಿಕ ಫೈರಿಂಗ್ - ಕಾನ್‌ಸ್ಟೇಬಲ್ ಸಾವು

ದಾವಣಗೆರೆ, ಆ. ೨೩: ಆಕಸ್ಮಿಕ ಫೈರಿಂಗ್‌ನಿAದ ಗುಂಡು ತಗುಲಿ ಸಶಸ್ತç ಮೀಸಲು ಪಡೆಯ ಕಾನ್‌ಸ್ಟೇಬಲ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಿಲ್ಲಾ ಸಶಸ್ತç ಮೀಸಲು ಪಡೆ ಆವರಣದಲ್ಲಿ ಸೋಮವಾರ ಬೆಳಗ್ಗೆ ಅವಘಡ ಸಂಭವಿಸಿದೆ. ಚೇತನ್ (೨೮) ಸಾವನ್ನಪ್ಪಿದ ಪೊಲೀಸ್ ಕಾನ್‌ಸ್ಟೇಬಲ್. ಬೆಳಗ್ಗೆಯ ತರಬೇತಿ ಮುಗಿಸಿ ಆಯುಧ ಸ್ವಚ್ಛ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಫೈರಿಂಗ್ ಆಗಿ ಗುಂಡು ತಗುಲಿದೆ. ಘಟನೆ ಬಳಿಕ ತುರ್ತಾಗಿ ದಾವಣಗೆರೆಯ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ಚೇತನ್ ಅವರನ್ನು ಸಾಗಿಸಲಾಯಿತು.ಆದರೆ, ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲಿಯೇ ಚೇತನ್ ಸಾವನ್ನಪ್ಪಿದ್ದಾರೆ.

ರಸ್ತೆಗಳಿಗೆ ಕಲ್ಯಾಣ್‌ಸಿಂಗ್ ಹೆಸರು

ಲಕ್ನೋ, ಆ. ೨೩: ಲಕ್ನೋ ಮತ್ತು ಅಯೋಧ್ಯೆ ಸೇರಿದಂತೆ ಆರು ಜಿಲ್ಲೆಗಳಲ್ಲಿ ತಲಾ ಒಂದು ರಸ್ತೆಗೆ ಮೂರು ದಿನಗಳ ಹಿಂದೆ ನಿಧನರಾದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ. ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಇದಕ್ಕಾಗಿ ಪ್ರಸ್ತಾವನೆಯನ್ನು ಸಿದ್ಧಪಡಿಸಲಿದ್ದು, ಅಯೋಧ್ಯೆ, ಲಕ್ನೋ, ಅಲಿಗಡ, ಇಟಾಹ್, ಬುಲಂದ್ ಶಹರ್ ಮತ್ತು ಪ್ರಯಾಗರಾಜ್ ನಲ್ಲಿ ತಲಾ ಒಂದು ಪಿಡಬ್ಲ್ಯೂಡಿ ಮುಖ್ಯ ರಸ್ತೆಗೆ ಕಲ್ಯಾಣ್ ಸಿಂಗ್ ಹೆಸರಿಡಲಾಗುವುದು ಎಂದು ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಹೇಳಿದರು. ಪಿಡಬ್ಲ್ಯುಡಿ ಅಧಿಕಾರಿಗಳು ಶೀಘ್ರದಲ್ಲೇ ಈ ಕುರಿತು ಪ್ರಸ್ತಾವನೆ ಕಳುಹಿಸುತ್ತಾರೆ ಎಂದು ಅವರು ಹೇಳಿದರು.

ಅಮೇರಿಕದಲ್ಲಿ ನೂರು ವರ್ಷಗಳಲ್ಲೇ ಅತಿ ಹೆಚ್ಚು ಮಳೆ

ವಾಷಿಂಗ್ಟನ್, ಆ. ೨೩: ಭಾರಿ ಮಳೆಯಿಂದಾಗಿ ಅಮೇರಿಕಾದ ಕೆಲ ಪ್ರದೇಶಗಳು ತತ್ತರಿಸಿ ಹೋಗಿದ್ದು, ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಈವರೆಗೆ ಕನಿಷ್ಟ ೨೨ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಪ್ರವಾಹದಲ್ಲಿ ನೂರಾರು ಕಾರುಗಳು ವಾಹನಗಳು ಕೊಚ್ಚಿ ಹೋಗಿವೆ. ಹಲವು ಮಂದಿ ಕಾಣೆಯಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ನೂರು ವರ್ಷಗಳಲ್ಲಿ ಅಮೇರಿಕ ಕಂಡ ಅತಿ ಹೆಚ್ಚು ಮಳೆ ಇದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಟೆನ್ನೆಸ್ಸೀಯ ಹಂಫ್ರೆ ಕೌಂಟಿಯಲ್ಲಿ ಕಳೆದ ೨೪ ಗಂಟೆಗಳಲ್ಲಿ ೪೩ ಇಂಚುಗಳಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕ್ಯಾನ್ಸರ್‌ಗೆ ರಿಯಾಯಿತಿ ದರದಲ್ಲಿ ಔಷಧ

ಬೆಂಗಳೂರು, ಆ. ೨೩: ಕ್ಯಾನ್ಸರ್ ಪೀಡಿತರಿಗೆ ಔಷಧಿಯ ವೆಚ್ಚ ಭರಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಕನಿಷ್ಟ ದರದಲ್ಲಿ ಚಿಕಿತ್ಸೆ ಕೊಡುವ ವ್ಯವಸ್ಥೆ ಕಲ್ಪಿಸಲು ಸೊಸೈಟಿಯನ್ನು ಸ್ಥಾಪನೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಕ್ಯಾನ್ಸರ್ ಸಂಶೊಧನಾ ಮತ್ತು ತರಬೇತಿ ಕೇಂದ್ರದಲ್ಲಿ ಇನ್ಫೋಸಿಸ್ ಪ್ರತಿಷ್ಠಾನ ನಿರ್ಮಿಸಿರುವ ಒ.ಪಿ.ಡಿ ಬ್ಲಾಕ್ ಹಾಗೂ ಇತರೆ ಸೌಲಭ್ಯಗಳ ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು. ಸಿ.ಎಸ್.ಆರ್ ಹಾಗೂ ಸರ್ಕಾರದ ನಿಧಿಯನ್ನು ಬಳಸಿ ಸೊಸೈಟಿಯ ಮೂಲಕ ರೋಗಿಗಳ ಆರೈಕೆಯಲ್ಲಿರುವ ಅವರ ಕುಟುಂಬದವರಿಗೆ ಅಗತ್ಯವಿರುವ ಅನುಕೂಲವನ್ನು ಸಹ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದರು. ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಆವಿಷ್ಕಾರಗಳ ಬಳಕೆಗೆ ಒತ್ತು ನೀಡಲಾಗುವುದು ಎಂದ ಅವರು ದೇಶದಲ್ಲಿಯೇ ಮುಂಚೂಣಿಯಲ್ಲಿರುವ ಕಿದ್ವಾಯಿ ಸಂಸ್ಥೆ, ಜಗತ್ತಿನ ಎಲ್ಲ ಉತ್ತಮ ವೈದ್ಯಕೀಯ ಸಂಸ್ಥೆಗಳೊAದಿಗೆ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.