ನಾಳೆ ದೆಹಲಿಗೆ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಆ. ೨೪: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾ. ೨೬ ರಂದು ದೆಹಲಿಗೆ ಭೇಟಿ ನೀಡಲಿದ್ದಾರೆ. ಮಹದಾಯಿ, ಮೇಕೆದಾಟು ಸೇರಿದಂತೆ ರಾಜ್ಯದ ನೀರಾವರಿ ಸಮಸ್ಯೆಗಳ ಸಂಬAಧ ಚರ್ಚಿಸಲು ಕೇಂದ್ರದ ಸಚಿವರ ಭೇಟಿಗೆ ಸಿಎಂ ಸಮಯಾವಕಾಶ ಕೇಳಿದ್ದು, ಭೇಟಿಯಲ್ಲಿ ರಾಜ್ಯದ ನೀರಾವರಿ ಸಮಸ್ಯೆಗಳ ಬಗ್ಗೆ ಬೊಮ್ಮಾಯಿ ಚರ್ಚಿಸಲಿದ್ದಾರೆ, ದೆಹಲಿಗೆ ತೆರಳುತ್ತಿರುವ ಬಗ್ಗೆ ತಮ್ಮ ನಿವಾಸದಲ್ಲಿ ಸುದ್ದಿಗಾರರಿಗೆ ಸ್ಪಷ್ಟಪಡಿಸಿದ ಸಿಎಂ, ದೆಹಲಿಯಲ್ಲಿ ನೀರಾವರಿ ಸಮಸ್ಯೆಗಳ ಬಗ್ಗೆ ವರಿಷ್ಠರು ಹಾಗೂ ಸಂಬAಧಪಟ್ಟ ಸಚಿವರ ಭೇಟಿಗೆ ಸಮಯಾವಕಾಶ ಕೇಳಿದ್ದೇನೆ. ಕೇಂದ್ರ ಆರೋಗ್ಯ, ಹಣಕಾಸು, ಜಲಶಕ್ತಿ, ಕೃಷಿ ಹಾಗೂ ರಕ್ಷಣಾ ಸಚಿವರ ಸಮಯ ಕೇಳಿದ್ದು, ಸಮಯಾವಕಾಶ ಸಿಗುತ್ತಿದ್ದಂತೆ ಅಲ್ಲಿ ಚರ್ಚಿಸಿ ದೆಹಲಿಯಿಂದ ಬೆಂಗಳೂರಿಗೆ ಬಂದ ಬಳಿಕ ತಾ. ೨೭ ರಂದು ಕಾನೂನು ತಜ್ಞರ ಸಭೆ ನಡೆಸುತ್ತಿರುವುದಾಗಿ ಹೇಳಿದರು. ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ನೀರಾವರಿ ವಿವಾದದ ಬಗ್ಗೆ ರಾಜ್ಯದ ಮುಂದಿನ ನಡೆಯ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಲಾಗುವುದು. ಕರ್ನಾಟಕದ ನೆಲ, ಜಲ, ಭಾಷೆಯ ಹಿತರಕ್ಷಣೆಗೆ ಸರ್ವ ಪ್ರಯತ್ನ ಮಾಡಲಾಗುವುದು. ಈ ವಿಷಯದಲ್ಲಿ ಯಾವುದೇ ರೀತಿಯ ಆತಂಕ ಬೇಡ ಎಂದು ಸ್ಪಷ್ಟಪಡಿಸಿದರು. ಹಿಂದೆ ನಾವೆಲ್ಲ ನೆಲ ಜಲ ವಿಚಾರದಲ್ಲಿ ಒಗ್ಗಟ್ಟಾಗಿ ಹೋರಾಡಿದ್ದಕ್ಕೆ ಇತಿಹಾಸದಲ್ಲಿ ಸಾಕ್ಷಿ ಇದೆ ಎಂದರು. ಹಿಂದಿನ ಸಂದರ್ಭಗಳಲ್ಲಿ ಏನೇನಾಗಿದೆ ಎಂಬುದನ್ನು ತಿಳಿಯಲಿ ಎಂದು ದೇವೇಗೌಡರಿಗೆ ಸೂಚ್ಯವಾಗಿ ಹೇಳಿದ ಸಿಎಂ, ಜೆಡಿಎಸ್ ನವರಿಗೆ ಪಾದಯಾತ್ರೆ ಮಾಡಲು ಸ್ವಾತಂತ್ರ‍್ಯ ಇದೆಯಾದರೂ ನೆಲ ಜಲ ವಿಚಾರದಲ್ಲಿ ನಾವು ನಮ್ಮ ಹಕ್ಕನ್ನು ಪಡೆದುಕೊಳ್ಳಲು ಎಲ್ಲ ಪ್ರಯತ್ನ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲವೆಂದು ಸ್ಪಷ್ಟಪಡಿಸಿದರು. ಸಂಪುಟದಲ್ಲಿ ನಾಲ್ಕು ಸಚಿವ ಸ್ಥಾನಗಳು ಬಾಕಿ ಉಳಿದಿವೆ. ಖಾಲಿ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಪಕ್ಷದ ರಾಷ್ಟಿçÃಯ ಅಧ್ಯಕ್ಷರ ಜೊತೆ ಚರ್ಚಿಸಿ ಅವರ ಅಭಿಪ್ರಾಯ ಪಡೆದು ಮುಂದುವರೆಯುವುದಾಗಿ ಹೇಳಿದರು.

ಆನಂದ್ ಸಿಂಗ್ ಅಧಿಕಾರ ಸ್ವೀಕಾರ

ಬೆಂಗಳೂರು, ಆ. ೨೪: ರಾಜ್ಯ ಪ್ರವಾಸೋದ್ಯಮ ಖಾತೆ ಸಚಿವರಾಗಿ ಆನಂದ್ ಸಿಂಗ್ ಅಧಿಕಾರ ಸ್ವೀಕಾರ ಮಾಡಿದರು. ಪ್ರವಾಸೋದ್ಯಮ ಖಾತೆ ಬೇಡವೆಂದು ರಾಜೀನಾಮೆ ನೀಡುವುದಾಗಿ ಹೇಳಿದ್ದ ಆನಂದ್ ಸಿಂಗ್ ಇಂದು ಅಧಿಕಾರ ಸ್ವೀಕಾರ ಮಾಡಿದರು. ವಿಕಾಸಸೌಧ ಕೊಠಡಿ ಸಂಖ್ಯೆ ೩೬ ರಲ್ಲಿ ಸಚಿವರು ಕಾರ್ಯಾರಂಭ ಮಾಡಿದರು.

ಮಹಾರಾಷ್ಟç ಸಿಎಂ ವಿರುದ್ಧ ಹೇಳಿಕೆ: ಕೇಂದ್ರ ಸಚಿವ ನಾರಾಯಣ ರಾಣೆ ಬಂಧನ

ಮುAಬೈ, ಆ. ೨೪: ಮಹಾರಾಷ್ಟç ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ರತ್ನಗಿರಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಮಧ್ಯೆ ರಾಣೆ ಅವರು ಸಿಎಂ ವಿರುದ್ಧದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಾವು ಸಿಎಂ ವಿರುದ್ಧ ಹೇಳಿಕೆ ನೀಡುವ ಮೂಲಕ ಯಾವುದೇ ಅಪರಾಧ ಮಾಡಿಲ್ಲ ಎಂದು ಹೇಳಿದ್ದಾರೆ. ದೇಶಕ್ಕೆ ಸ್ವಾತಂತ್ರ‍್ಯ ಲಭಿಸಿದ್ದು ಯಾವ ವರ್ಷ ಎಂಬುದನ್ನು ತಿಳಿಯದೇ ಇರುವ ಮಹಾರಾಷ್ಟçದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಸೋಮವಾರ ರಾಯಗಡದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾರಾಯಣ ರಾಣೆ ಹೇಳಿದ್ದರು. ಆಗಸ್ಟ್ ೧೫ ರಂದು ಸ್ವಾತಂತ್ರ‍್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಧ್ವಜಾರೋಹಣ ನಡೆಸಿ ಭಾಷಣ ಮಾಡುತ್ತಿದ್ದ ವೇಳೆ ಸ್ವಾತಂತ್ರ‍್ಯ ಲಭಿಸಿದ ವರ್ಷವನ್ನು ಪಕ್ಕದವರಿಂದ ಕೇಳಿ ತಿಳಿದುಕೊಂಡು ಹೇಳಿದ್ದರು. ಇದನ್ನು ಉಲ್ಲೇಖಿಸಿ ರಾಣೆ ಹೇಳಿಕೆ ನೀಡಿದ್ದರು. ರಾಣೆ ಹೇಳಿಕೆಗೆ ಶಿವಸೇನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಚಿವರನ್ನು ಬಂಧಿಸಬೇಕು ಎಂದು ಒತ್ತಾಯಿಸಿತ್ತು.

ಅಫ್ಘನ್ ಬಿಕ್ಕಟ್ಟು; ಪುಟಿನ್ ಜೊತೆ ಪ್ರಧಾನಿ ಮೋದಿ ಮಾತುಕತೆ

ನವದೆಹಲಿ, ಆ. ೨೪: ಅಫ್ಘಾನಿಸ್ತಾನದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ವಿವರವಾದ ಮಾತುಕತೆ ನಡೆಸಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅಫ್ಘನ್ ಪರಿಸ್ಥಿತಿಗಳ ಜೊತೆಗೆ ಎರಡೂ ದೇಶಗಳ ದ್ವಿಪಕ್ಷೀಯ ಸಂಬAಧಗಳ ಬಗ್ಗೆಯೂ ಮಂಗಳವಾರ ಸಮಗ್ರ ಚರ್ಚೆ ನಡೆಸಲಾಯಿತು. ನಮ್ಮಿಬ್ಬರ ನಡುವಣ ಪರಸ್ಪರ ಪ್ರಯೋಜನಕಾರಿ ಮಾತುಕತೆ ನಡೆಯಿತು. ಪರಸ್ಪರ ಅಭಿಪ್ರಾಯಗಳನ್ನು ಹಂಚಿಕೊAಡಿದ್ದೇವೆ ಎಂದು ಟ್ವೀಟರ್‌ನಲ್ಲಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ಮಂಗಳವಾರ ಟ್ವೀಟರ್‌ನಲ್ಲಿ ಅಫ್ಘಾನಿಸ್ತಾನದಲ್ಲಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ನನ್ನ ಮಿತ್ರ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ವಿವರವಾಗಿ ಮಾತುಕತೆ ನಡೆಸಿದೆ. ಪರಸ್ಪರ ಪ್ರಯೋಜನವಾಗುವ ರೀತಿಯಲ್ಲಿ ಅಭಿಪ್ರಾಯಗಳನ್ನು ಹಂಚಿಕೊAಡಿದ್ದೇವೆ. ಕೋವಿಡ್-೧೯ ಸಾಂಕ್ರಾಮಿಕ ವಿಷಯದಲ್ಲಿ ಭಾರತ-ರಷ್ಯಾ ನಡುವಣ ಸಹಕಾರದ ಜೊತೆಗೆ ದ್ವಿಪಕ್ಷೀಯ ಕಾರ್ಯಸೂಚಿ ಬಗ್ಗೆ ಚರ್ಚೆ ನಡೆಸಿದವು. ಮಹತ್ವದ ವಿಷಯಗಳ ಬಗ್ಗೆ ಸಮಾಲೋಚನೆ ಮುಂದುವರಿಸಲು ಸಮ್ಮತಿಸಿದೆವು ಎಂದು ಹೇಳಿದ್ದಾರೆ. ಅಫ್ಘಾನಿಸ್ತಾನದ ರಾಜಧಾನಿ ಕ್ಯಾಬೂಲ್‌ನಿಂದ ತನ್ನ ರಾಯಭಾರ ಕಾರ್ಯಾಲಯವನ್ನು ಭಾರತ ತೆರವುಗೊಳಿಸಿದೆ. ತಾಲಿಬಾನ್‌ಗಳ ಆಡಳಿತ ಶೈಲಿ, ಇತರ ಪ್ರಜಾಪ್ರಭುತ್ವ ದೇಶಗಳ ಸ್ಪಂದನೆಗಳ ಆಧಾರದ ಮೇಲೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಭಾರತ ಹೇಳಿದೆ. ರಷ್ಯಾ ತನ್ನ ರಾಯಭಾರಿ ಕಚೇರಿಗಳನ್ನು ಕಾಬೂಲ್‌ನಲ್ಲಿ ಮುಂದುವರಿಸಿದೆ. ತಾಲಿಬಾನ್ ಜೊತೆ ಸಂಪರ್ಕ ಸಾಧಿಸುವ ಎಲ್ಲಾ ಮಾರ್ಗಗಳನ್ನು ತೆರೆದುಕೊಂಡಿದೆ. ತಾಲಿಬಾನ್ ಆಡಳಿತಕ್ಕೆ ಮಾನ್ಯತೆ ನೀಡಲು ಅಳೆದು ತೂಗಿ ಪರಿಶೀಲಿಸಲಿದೆ. ಅತಿ ಸಂಪ್ರದಾಯವಾದಿ ಆಡಳಿತಗಾರರ ವಿರುದ್ಧ ನಿರ್ಣಯ ತೆಗೆದುಕೊಳ್ಳಲು ತಾವು ಆತುರಪಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಅಫ್ಘಾನಿಸ್ತಾನದಿಂದ ವಲಸೆಹೋಗಿರುವ ಜನರನ್ನು ರಷ್ಯಾ, ಮತ್ತಿತರ ದೇಶಗಳಿಗೆ ಕಳುಹಿಸಲು ಪಾಶ್ಚಾತ್ಯ ದೇಶಗಳ ಆಲೋಚನೆಗೆ ರಷ್ಯಾ ಅಧ್ಯಕ್ಷ ಪುಟಿನ್ ತೀವ್ರ ವಿರೋಧ ವ್ಯಕ್ತಪಡಿಸಿದರು. ವಲಸಿಗರ ಹೆಸರಿನಲ್ಲಿ ಭಯೋತ್ಪಾದಕರು ಪ್ರವೇಶಿಸುವುದನ್ನು ರಷ್ಯಾ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಟಿಯರ ಡ್ರಗ್ಸ್ ಸೇವನೆ ದೃಢ: ವರದಿ

ಬೆಂಗಳೂರು, ಆ. ೨೪: ಮಾದಕ ಜಾಲ ಪ್ರಕರಣಕ್ಕೆ ಸಂಬAಧಿಸಿದAತೆ ಸ್ಯಾಂಡಲ್‌ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ಮಾಡಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ಖಚಿತವಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾತನಾಡಿ, ಸಾಮಾನ್ಯವಾಗಿ ನಾವು ಯಾವುದೇ ಡ್ರಗ್ಸ್ ಪ್ರಕರಣವನ್ನು ದಾಖಲಿಸಿಕೊಂಡಾಗ, ಅದರಲ್ಲಿ ಆರೋಪಿಗಳು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬದನ್ನು ಖಚಿತ ಪಡಿಸಲು ಮೊದಲಿಗೆ ರಕ್ತ ಹಾಗೂ ಮೂತ್ರದ ಸ್ಯಾಂಪಲ್‌ಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿಕೊಡುತ್ತಿದ್ದೆವು. ಆದರೆ, ರಕ್ತ ಮತ್ತು ಮೂತ್ರದ ಸ್ಯಾಂಪಲ್‌ಗಳಲ್ಲಿ ಒಂದೆರಡು ದಿನಗಳ ಹಿಂದೆ ಡ್ರಗ್ಸ್ ಸೇವಿಸಿದ್ದರೆ ಮಾತ್ರ ವರದಿಯಲ್ಲಿ ಪಾಸಿಟಿವ್ ಬರುತ್ತಿತ್ತು ಎಂದರು. ಅನೇಕ ಪ್ರಕರಣಗಳಲ್ಲಿ ಸುಮಾರು ದಿನಗಳ ಬಳಿಕ ನಾವು ಬಂಧಿಸಿದ್ದರೆ, ಅಂತಹ ಸಂದರ್ಭಗಳಲ್ಲಿ ರಕ್ತ ಮತ್ತು ಮೂತ್ರದ ಸ್ಯಾಂಪಲ್‌ಗಳಲ್ಲಿ ಡ್ರಗ್ಸ್ ಸೇವನೆ ಪತ್ತೆ ಮಾಡಲು ಕಷ್ಟವಾಗುತ್ತಿತ್ತು. ಈ ಕಾರಣದಿಂದ ನಾವು ನಮ್ಮ ಸಾಕ್ಷಾö್ಯಧಾರಗಳಿಗಾಗಿ ಕೂದಲು ಸ್ಯಾಂಪಲ್‌ಗಳನ್ನು ಕಳುಹಿಸುತ್ತಿದ್ದೆವು ಎಂದರು. ಅಧ್ಯಯನದ ಪ್ರಕಾರ ಕೂದಲಿನಲ್ಲಿ ಒಂದು ವರ್ಷದವರೆಗೂ ಡ್ರಗ್ಸ್ ಇರುತ್ತದೆ. ಆ ಕಾರಣದಿಂದ ಈ ಪ್ರಕರಣದಲ್ಲಿ ಕಳೆದ ವರ್ಷ ನಾವು ಆರೋಪಿಗಳ ಕೂದಲು ಸ್ಯಾಂಪಲ್ ಸಂಗ್ರಹಿಸಿ ಹೈದರಾಬಾದ್‌ನ ಸಿಎಫ್‌ಎಸ್‌ಎಲ್ ಲ್ಯಾಬ್‌ಗೆ ಕಳುಹಿಸಿದ್ದೇವು. ಕರ್ನಾಟಕದಲ್ಲಿ ಕೂದಲು ಸ್ಯಾಂಪಲ್ ತೆಗೆದು ಕೊಂಡು ಲ್ಯಾಬ್‌ಗೆ ಕಳುಹಿಸಿರುವುದು ಇದೇ ಪ್ರಥಮ ಬಾರಿಗೆ. ಈಗ ವರದಿ ಕೈಸೇರಿದ್ದು, ಅದರಲ್ಲಿ ಆರೋಪಿಗಳು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ ಎಂದರು. ಇದೇ ವೇಳೆ ಸ್ಯಾಂಡಲ್‌ವುಡ್ ನಟಿ ಮಣಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಎಫ್‌ಎಸ್‌ಎಲ್ ಪರೀಕ್ಷೆಯಲ್ಲಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದು, ಇಂದಿನ ವರದಿ ನೋಡಿ ಸಮಾಧಾನವಾಗಿದೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.