ಕುಶಾಲನಗರ, ಆ. ೨೩: ಜಿಲ್ಲೆಯ ಗಡಿಭಾಗದ ಕೊಪ್ಪ ಗೇಟ್‌ನ ವಾಹನ ತಪಾಸಣಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದರು .

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸ್ಥಳೀಯ ಅಧಿಕಾರಿಗಳೊಂದಿಗೆ ಕುಶಾಲನಗರದ ಗಡಿಭಾಗದ ಕೊಪ್ಪ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಿ ದಿನನಿತ್ಯ ಜಿಲ್ಲೆಗೆ ಆಗಮಿಸುವ ವಾಹನಗಳ ದಾಖಲೆ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಕೇಂದ್ರದ ಸಿಬ್ಬಂದಿಗಳ ಜತೆ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು.

ಕೂಡಿಗೆ: ಶಿರಂಗಾಲ ಚೆಕ್‌ಪೋಸ್ಟ್ಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಭೇಟಿ ನೀಡಿ ಗಡಿ ಭಾಗದ ತಪಾಸಣೆಯ ಬಗ್ಗೆ ಸಮಗ್ರವಾದ ಪರಿಶೀಲನೆ ನಡೆಸಿದರು.

ಗಡಿ ಭಾಗದಲ್ಲಿ ತೆರೆಯಲಾಗಿರುವ ತಪಾಸಣೆ ಕೇಂದ್ರದಲ್ಲಿ ವಿವಿಧ ಇಲಾಖೆಗಳು ಕೈಗೊಂಡಿರುವ ಕ್ರಮದ ವಿವರಗಳನ್ನು ಮೊದಲು ಪಡೆದು ನೋಂದಣಿ ಪುಸ್ತಕಗಳ ಪರಿಶೀಲನೆ ನಡೆಸಿದರು. ನಂತರ ಅಂತರರಾಜ್ಯದಿAದ ಬರುವ ವಾಹನಗಳ ಕಟ್ಟುನಿಟ್ಟಿನ ತಪಾಸಣೆಯ ವಿವರ ಪುಸ್ತಕವನ್ನು ಪರಿಶೀಲನೆ ಮಾಡಿ ಕ್ರಮಬದ್ದವಾಗಿ ನೋಂದಣಿ ಮಾಡುವಂತೆ ಸೂಚನೆ ನೀಡಿದರು.

ಹೊರ ರಾಜ್ಯದಿಂದ ಬರುವವರಿಗೆ ಕಟ್ಟುನಿಟ್ಟಾಗಿ ದ್ರವ ಪರೀಕ್ಷೆ ಸೇರಿದಂತೆ ತಪಾಸಣೆ ಮತ್ತು ದಾಖಲೆಗಳನ್ನು ಪರಿಶೀಲಿಸಿದ ನಂತರ ಜಿಲ್ಲೆಗೆ ಪ್ರವೇಶಿಸುವ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭ ಶಿರಂಗಾಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾಗೀರತಿ, ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜ್, ಕುಶಾಲನಗರ ತಹಶೀಲ್ದಾರ್ ಪ್ರಕಾಶ್, ಕುಶಾಲನಗರ ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮ ಲೆಕ್ಕಾಧಿಕಾರಿ ಉಷಾ, ಗೌತಮ್ ಸೇರಿದಂತೆ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಶಿವಶಂಕರ್, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವರ್ಗದವರು ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.