ಸಿದ್ದಾಪುರ, ಆ. ೨೩: ಶ್ರೀ ನಾರಾಯಣ ಧರ್ಮಪರಿಪಾಲನಾ (ಎಸ್.ಎನ್.ಡಿ.ಪಿ) ಯೋಗಂ ಕೊಡಗು ಯೂನಿಯನ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ೧೬೭ನೇ ಜಯಂತಿಯನ್ನು ಸಿದ್ದಾಪುರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸಿದ್ದಾಪುರದ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಧ್ವಜಾರೋಹಣವನ್ನು ಮಾಜಿ ತಾ.ಪಂ ಸದಸ್ಯ ಟಿ.ಕೆ ಶ್ರೀಧರನ್ ನೆರವೇರಿಸಿದರು. ಸಭಾ ಕಾರ್ಯ ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಶಾಸಕ ಕೆ.ಜಿ. ಬೋಪಯ್ಯ, ಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತವನ್ನು ಎಲ್ಲರೂ ಮೈಗೂಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು. ನಾರಾಯಣ ಗುರುಗಳು ಈ ದೇಶಕ್ಕೆ ಉತ್ತಮ ಸಂದೇಶವನ್ನು ನೀಡಿದ್ದು, ನಾರಾಯಣ ಗುರುಗಳ ಸಂದೇಶಗಳು ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಜಯಂತಿಯನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತ ವಾಗಿರದೇ ಅವರ ಆದರ್ಶ ಗುಣಗಳನ್ನು ಮುಂದಿನ ಪೀಳಿಗೆಗಳಿಗೆ ಪರಿಚಯಿಸಬೇಕೆಂದರು. ಪೋಷಕರು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸವನ್ನು ನೀಡುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ಒದಗಿಸಿಕೊಡುವ ಮೂಲಕ ಸರ್ಕಾರದ ಯೋಜನೆ ಗಳನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜಿಲ್ಲಾ ಎಸ್.ಎನ್.ಡಿ.ಪಿ ಯೂನಿಯನ್ ಅಧ್ಯಕ್ಷ ವಿ.ಕೆ ಲೋಕೇಶ್ ಮಾತನಾಡಿ ನಾರಾಯಣ ಗುರುಗಳು ಅಂದಿನ ಕಾಲದಲ್ಲಿ ತುಳಿತಕ್ಕೆ ಒಳಗಾದ ಹಿಂದುಳಿದ

(ಮೊದಲ ಪುಟದಿಂದ) ವರ್ಗದ ಜನಾಂಗವನ್ನು ಮೇಲೆತ್ತಲು ಅಪಾರ ಶ್ರಮ ವಹಿಸಿದ್ದಾರೆ. ಸಮಾಜದಲ್ಲಿ ಸಮಾನತೆಯ ಸಂದೇಶವನ್ನು ಸಾರಿದ ಗುರುಗಳು ಒಂದೇ ಜಾತಿ, ಒಂದೇ ಧರ್ಮ ಎಂಬ ಸಂದೇಶವನ್ನು ಸರ್ವಧರ್ಮ ಸಮ್ಮೇಳನ ಮಾಡಿದ ಮಹಾನ್ ವ್ಯಕ್ತಿ ನಾರಾಯಣ ಗುರುಗಳು ಎಂದು ಬಣ್ಣಿಸಿದರು.

ಮುಂದಿನ ದಿನಗಳು ಎಸ್.ಎನ್.ಡಿ.ಪಿ ಸಂಘಟನೆ ವತಿ ಯಿಂದ ಸಾಮೂಹಿಕ ವಿವಾಹ ಕಾರ್ಯ ವನ್ನು ನಡೆಸಲು ಯೋಜನೆ ರೂಪಿಸಲಾಗುವುದೆಂದರು. ಕೋವಿಡ್ ಸಂದರ್ಭದಲ್ಲಿ ಸಮಸ್ಯೆಗಳಿಗೆ ಸಿಲುಕಿದ್ದ ಕುಟುಂಬಗಳನ್ನು ಗುರುತಿಸಿ ಅಗತ್ಯ ವಸ್ತುಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್.ಎನ್. ಡಿ.ಪಿ ಸಂಘಟನೆಯ ಉಪಾಧ್ಯಕ್ಷ ಆರ್. ರಾಜನ್, ಪ್ರಮುಖರಾದ ಗಿರೀಶ್ ಮಟ್ಟಂ, ವಿನೋದ್ ತರಮಲ್, ಯಿಂದ ಸಾಮೂಹಿಕ ವಿವಾಹ ಕಾರ್ಯ ವನ್ನು ನಡೆಸಲು ಯೋಜನೆ ರೂಪಿಸಲಾಗುವುದೆಂದರು. ಕೋವಿಡ್ ಸಂದರ್ಭದಲ್ಲಿ ಸಮಸ್ಯೆಗಳಿಗೆ ಸಿಲುಕಿದ್ದ ಕುಟುಂಬಗಳನ್ನು ಗುರುತಿಸಿ ಅಗತ್ಯ ವಸ್ತುಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್.ಎನ್. ಡಿ.ಪಿ ಸಂಘಟನೆಯ ಉಪಾಧ್ಯಕ್ಷ ಆರ್. ರಾಜನ್, ಪ್ರಮುಖರಾದ ಗಿರೀಶ್ ಮಟ್ಟಂ, ವಿನೋದ್ ತರಮಲ್, ವೀರಾಜಪೇಟೆ: ವೀರಾಜಪೇಟೆ ಯ ಬಿಟ್ಟಂಗಾಲ ಗ್ರಾಮದ ಅಂಬಟ್ಟಿಯಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ ೧೬೭ನೇ ಜನ್ಮ ದಿನಾಚರಣೆ ಆಚರಿಸಲಾಯಿತು.

ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ವೀರಾಜಪೇಟೆ ತಾಲೂಕು ಬಿಲ್ಲವ ಸೇವಾ ಸಮಾಜದ ಅಧ್ಯಕ್ಷ ಬಿ.ಎಂ. ಗಣೇಶ, ಎಲ್ಲರ ಹೃದಯದಲ್ಲೂ ಭಗವಂತ ನೆಲೆಸಿದ್ದಾನೆ ಎಂದು ತೋರಿಸಿಕೊಟ್ಟವರು ನಾರಾಯಣ ಗುರುಗಳು. ಈ ನಿಟ್ಟಿನಲ್ಲಿ ನಾರಾಯಣ ಗುರುಗಳ ಸಂದೇಶಗಳ ಅನುಸರಣೆಯನ್ನು ನಾವು ಮಾಡಬೇಕಿದೆ. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶದಡಿ ಸಮಾಜದಲ್ಲಿ ಬದುಕಬೇಕು ಎಂದರು.

ಈ ಸಂದರ್ಭ ಗೌರವ ಅಧ್ಯಕ್ಷ ಬಿ.ಆರ್. ರಾಜ, ಉಪಾಧ್ಯಕ್ಷ ಬಿ. ಪುರುಷೋತ್ತಮ, ಕಾರ್ಯದರ್ಶಿ ಬಿ.ಎಸ್. ಜನಾರ್ಧನ, ಸಹಕಾರ್ಯದರ್ಶಿ ಬಿ.ಲಕ್ಷö್ಮಣ್, ಖಜಾಂಚಿ ಬಿ.ಎಂ. ಸತೀಶ್, ಸದಸ್ಯರಾದ ಬಿ.ಎಸ್ ಸತೀಶ್, ಬಿ.ಜಿ. ನಾರಾಯಣ, ಬಿ. ಸೋಮಪ್ಪ, ಬಿ.ಎನ್ ಮುತ್ತಪ್ಪ, ರೂಪಾ ಬಿ.ಎಸ್. ಸೇರಿದಂತೆ ಆಡಳಿತ ಮಂಡಳಿಯ ಇನ್ನಿತರ ಸದಸ್ಯರುಗಳು ಪಾಲ್ಗೊಂಡಿದ್ದರು.