ಮಡಿಕೇರಿ, ಆ. ೨೬: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ಘಟಕದ ಕಾರ್ಯಕಾರಿಣಿ ಸಭೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಜಾಲತಾಣ ಘಟಕದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾಮಾಜಿಕ ಜಾಲತಾಣದ ನಿರ್ವಹಣೆ ಮತ್ತು ಕಾರ್ಯಕರ್ತರ ಸೇರ್ಪಡೆ ಕುರಿತು ಚರ್ಚಿಸಲಾಯಿತು. ಬ್ಲಾಕ್, ವಲಯ ಮತ್ತು ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಕಾಂಗ್ರೆಸ್ ಪಕ್ಷದ ಪರವಾಗಿ ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರ ಕಾರ್ಯ ಕೈಗೊಳ್ಳಲು ಸಭೆ ನಿರ್ಧರಿಸಿತು. ಜಿಲ್ಲಾ ಕಾರ್ಯಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಸಾಮಾಜಿಕ ಜಾಲತಾಣದ ಮೂಲಕ ವೇಗವಾಗಿ ಜನರನ್ನು ತಲುಪಲು ಸಾಧ್ಯವಾಗಲಿದ್ದು, ಕಾರ್ಯಕರ್ತರು ಕಾರ್ಯೋನ್ಮುಖ ರಾಗಬೇಕು ಎಂದರು. ಕಾಂಗ್ರೆಸ್‌ಗೆ ೭೦ ವರ್ಷಗಳ ಸಾಧನೆಯ ಇತಿಹಾಸವಿದ್ದು, ಪಕ್ಷದ ಸಾಧನೆಗಳನ್ನು ಭಿತ್ತರಿಸುವ ಕಾರ್ಯಕ್ಕೆ ಕಾಂಗ್ರೆಸ್ ಪಕ್ಷದ ಪರವಾಗಿ ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರ ಕಾರ್ಯ ಕೈಗೊಳ್ಳಲು ಸಭೆ ನಿರ್ಧರಿಸಿತು. ಜಿಲ್ಲಾ ಕಾರ್ಯಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಸಾಮಾಜಿಕ ಜಾಲತಾಣದ ಮೂಲಕ ವೇಗವಾಗಿ ಜನರನ್ನು ತಲುಪಲು ಸಾಧ್ಯವಾಗಲಿದ್ದು, ಕಾರ್ಯಕರ್ತರು ಕಾರ್ಯೋನ್ಮುಖ ರಾಗಬೇಕು ಎಂದರು. ಕಾಂಗ್ರೆಸ್‌ಗೆ ೭೦ ವರ್ಷಗಳ ಸಾಧನೆಯ ಇತಿಹಾಸವಿದ್ದು, ಪಕ್ಷದ ಸಾಧನೆಗಳನ್ನು ಭಿತ್ತರಿಸುವ ಕಾರ್ಯಕ್ಕೆ ಕಾಂಗ್ರೆಸ್ ನೇತೃತ್ವದ ಸರ್ಕಾರದ ಹಲವು ಯೋಜನೆ, ಸಾಧನೆಗಳನ್ನು ಜನರಿಗೆ ತಲುಪಿಸುವಲ್ಲಿ ನಾವು ಹಿಂದೆ ಬಿದ್ದಿದ್ದೇವೆ. ತಾವುಗಳು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರಾಗಿರು ವುದರಿಂದ ಸಂವಿಧಾನಿಕವಾಗಿ ವರ್ತಿಸಿ ಎಂದು ಕಿವಿಮಾತು ಹೇಳಿದರು.

ಸಾಮಾಜಿಕ ಜಾಲತಾಣದ ಜಿಲ್ಲಾ ಉಪಾಧ್ಯಕ್ಷ ಲೋಹಿತ್ ಗೌಡ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹನೀಫ್ ಸಂಪಾಜೆ, ಜಿಲ್ಲಾ ಸಮಿತಿ ಸದಸ್ಯರಾದ ಕೊಟ್ಟಮುಡಿ ಶಾಫಿ, ಮಿನಾಜ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿಲನ್, ನಾಪೋಕ್ಲು ಬಷೀರ್, ಮಡಿಕೇರಿ ನಗರ ತಾಹ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.