ಸಿದ್ದಾಪುರ, ಆ. ೨೬: ಮಾಲ್ದಾರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾರ್ವಜನಿಕ ಮೈದಾನಕ್ಕೆ ಜಾಗ ಒದಗಿಸಿಕೊಡಬೇಕು ಹಾಗೂ ನಿವೇಶನ ರಹಿತರಿಗೆ ಮನೆ ನಿರ್ಮಾಣಕ್ಕೆ ಸರ್ಕಾರಿ ಭೂಮಿಯನ್ನು ನೀಡಬೇಕೆಂದು ಗ್ರಾ.ಪಂ. ಅಧ್ಯಕ್ಷ ಸಮೀರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು. ಮಾಲ್ದಾರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾಕಷ್ಟು ಸರ್ಕಾರಿ ಭೂಮಿಗಳಿದ್ದು, ಇವುಗಳನ್ನು ಗುರುತಿಸಿ ಮಾಲ್ದಾರೆ ಭಾಗದಲ್ಲಿ ಸಾರ್ವಜನಿಕರಿಗೆ ಮೈದಾನ ನಿರ್ಮಾಣ ಮಾಡಬೇಕು.

ನಿವೇಶನ ರಹಿತರಿಗೆ ನಿವೇಶನವನ್ನು ನೀಡಲು ಹಾಗೂ ಈ ಭಾಗದಲ್ಲಿ ವಾಸ ಮಾಡುತ್ತಿರುವ ಹಲವಾರು ಮಂದಿ ಗ್ರಾಮಸ್ಥರಿಗೆ ಆಧಾರ್ ಕಾರ್ಡ್ಗಳ ಸಮಸ್ಯೆ ಇದ್ದು, ಅದನ್ನು ಕೂಡ ಮಾಲ್ದಾರೆ ಗ್ರಾ.ಪಂ. ಮೂಲಕ ಸರಿಪಡಿಸಿಕೊಡಲು ಸಹಕಾರ ನೀಡಬೇಕೆಂದು ಮನವಿ ಪತ್ರದಲ್ಲಿ ಕೋರಲಾಗಿದೆ. ಈ ಸಂದರ್ಭ ಗ್ರಾ.ಪಂ. ಸದಸ್ಯರುಗಳಾದ ನಿಯಾಜ್, ಕಿರಣ್, ಅನೀಫ, ಇನ್ನಿತರರು ಹಾಜರಿದ್ದರು.