ಸುಂಟಿಕೊಪ್ಪ, ಆ. ೨೬: ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕೋವಿಡ್-೧೯ರ ಅಭಿಯಾನದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಪ್ರಚಾರ ಜಾಥಾ ರಥಕ್ಕೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಚಾಲನೆ ನೀಡಿದರು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಕೃಷಿ ಇಲಾಖೆಯ ಅಧಿಕಾರಿ ಮನಸ್ವಿ ಮಾತನಾಡಿ ಕೊರೊನಾ ಹಿನ್ನೆಲೆ ರೈತರು, ಕೃಷಿಕರು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಹೊಲ, ತೋಟ, ಗದ್ದೆಗಳಲ್ಲಿ ಕೆಲಸ ನಿರ್ವಹಿಸಬೇಕು ಎಂದರು.

ಈ ಸಂದರ್ಭ ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಸದಸ್ಯರುಗಳಾದ ಸೋಮನಾಥ್, ಆಲಿಕುಟ್ಟಿ, ವಸಂತಿ, ರೇಷ್ಮ, ಮಂಗಳ, ಮಹೇಶ್ ರೈ ಹಾಗೂ ಇಲಾಖೆಯ ಸಿಬ್ಬಂದಿಗಳು ಇದ್ದರು.