ಚೆಟ್ಟಳ್ಳಿ, ಆ. ೨೭: ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಹಾಸಭೆ ತಾ. ೩೦ ರಂದು ನಡೆಯಲಿದೆ ಎಂದು, ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ನಡೆದ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ, ಈಗಾಗಲೇ ಜಿಲ್ಲಾ ಫುಟ್ಬಾಲ್ ಸಂಸ್ಥೆಯಲ್ಲಿ ೨೦ ತಂಡಗಳು ನೋಂದಣಿಯಾಗಿದೆ. ಎಲ್ಲಾ ಕ್ಲಬ್‌ಗಳು ನಮ್ಮೊಂದಿಗೆ ಕೈ ಜೋಡಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಉತ್ತಮ ಮಹಿಳಾ ತಂಡವನ್ನು ಕಟ್ಟುವ ಕಾರ್ಯ ಪ್ರಗತಿಯಲ್ಲಿದ್ದು, ಜಿಲ್ಲೆಯ ಫುಟ್ಬಾಲ್ ಬೆಳವಣಿಗೆ ನಮ್ಮ ಗುರಿಯಾಗಿದೆ ಎಂದರು.

ತಾ. ೩೦ ರಂದು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷರಾದ ಮೋಹನ್ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಅಮ್ಮತ್ತಿಯಲ್ಲಿ ನಡೆಯುವ ಸಭೆಯಲ್ಲಿ, ರಾಜ್ಯ ಮಟ್ಟದ ಫುಟ್ಬಾಲ್ ಸಂಸ್ಥೆಯಿAದ ವೀಕ್ಷಕರು ಆಗಮಿಸಲಿದ್ದಾರೆ ಎಂದು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಮಟ್ಟದ ಫುಟ್ಬಾಲ್ ಸಂಸ್ಥೆಯ ತೀರ್ಪುಗಾರರ ಸಂಘದ ಅಧ್ಯಕ್ಷ ಪಿ.ಎ ನಾಗೇಶ್ ತಿಳಿಸಿದ್ದಾರೆ.

ಈ ಸಂದರ್ಭ ಸಭೆಯಲ್ಲಿ, ರಾಜ್ಯ ಫುಟ್ಬಾಲ್ ಸಂಸ್ಥೆಯ ಉಪಾಧ್ಯಕ್ಷ ಜಗದೀಶ್,ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಉಪಾಧ್ಯಕ್ಷೆ ದೇಚಮ್ಮ,ಖಜಾಂಚಿ ದೀಪು ಮಾಚಯ್ಯ,ಸದಸ್ಯರಾದ ಜಗದೀಶ್ ಮರಗೋಡು ಹಾಗೂ ಲಿಜೇಶ್ ಅಮ್ಮತ್ತಿ ಇದ್ದರು.