ಮಡಿಕೇರಿ, ಆ.೨೭ : ಜಿಲ್ಲೆಯಲ್ಲಿ ಮೊಗೇರ ಸಮಾಜಕ್ಕೆ ಸಮುದಾಯ ಭವನದ ಅಗತ್ಯವಿದ್ದು, ಸರ್ಕಾರದ ಮೂಲಕ ನಿವೇಶನ ಒದಗಿಸಿಕೊಡುವಂತೆ ಒಳನಾಡು ಬಂದರು, ಮೀನುಗಾರಿಕೆ ಸಚಿವ ಎಸ್.ಅಂಗಾರ ಅವರಲ್ಲಿ ಕೊಡಗು ಜಿಲ್ಲಾ ಮೊಗೇರ ಸಮಾಜ ಮನವಿ ಮಾಡಿದೆ.

ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸಮಾಜದ ಪ್ರಮುಖರು ಶಾಸಕ ಕೆ.ಜಿ.ಬೋಪಯ್ಯ ಹಾಗೂ ಕರ್ನಾಟಕ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ ಅವರ ಸಮ್ಮುಖದಲ್ಲಿ ಸಚಿವರೊಂದಿಗೆ ಸಮಾಲೋಚನೆ ನಡೆಸಿದರು. ಇದಕ್ಕೂ ಮೊದಲು ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಸಚಿವ ಅಂಗಾರ ಅವರನ್ನು ಮೊಗೇರ ಸಮಾಜದ ಪದಾಧಿಕಾರಿಗಳು ಹೂವಿನ ಹಾರ ಮತ್ತು ಶಾಲು ತೊಡಿಸಿ ಆತ್ಮೀಯವಾಗಿ ಬರ ಮಾಡಿಕೊಂಡರು.

ಈ ಸಂದರ್ಭ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಹಾಗೂ ಸಮಾಜದ ಗೌರವಾಧ್ಯಕ್ಷ ಪಿ.ಎಂ.ರವಿ, ಪ್ರಧಾನ ಕಾರ್ಯದರ್ಶಿ ಪಿ.ಬಿ.ಜನಾರ್ಧನ, ಜಿ.ಪಂ ಮಾಜಿ ಅಧ್ಯಕ್ಷ ಹಾಗೂ ನಿಕಟ ಪೂರ್ವ ಅಧ್ಯಕ್ಷ ಬಿ.ಶಿವಪ್ಪ, ಸೋಮವಾರಪೇಟೆ ಪ.ಪಂ ಸದಸ್ಯ ಪಿ.ಕೆ.ಚಂದ್ರು, ಮಡಿಕೇರಿ ತಾಲೂಕು ಅಧ್ಯಕ್ಷ ಪಿ.ಬಿ.ಸುರೇಶ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಜಿ.ಮೋಹನ್, ಸ್ಥಾಪಕ ಅಧ್ಯಕ್ಷ ಸದಾನಂದ ಮಾಸ್ಟರ್, ಜಿಲ್ಲಾ ಸಮಿತಿ ಸದಸ್ಯ ಸುರೇಶ್, ಸೋಮಯ್ಯ, ಪೊಡಿಯ, ಚಂದ್ರು, ಪಿ.ಕೆ.ರಮೇಶ್, ಕಗ್ಗೋಡು ಜನಾರ್ಧನ್, ಪಿ.ಸಿ.ರಘು, ಸಂಜೀವ, ವಿಶ್ವನಾಥ್ ಸೇರಿದಂತೆ ಮತ್ತಿತರ ಪದಾಧಿಕಾರಿಗಳು ಹಾಜರಿದ್ದರು.