ವೀರಾಜಪೇಟೆ, ಆ. ೨೭: ರೈತಾಪಿ ವರ್ಗಕ್ಕೆ ಸರ್ಕಾರಗಳು ಬೆಂಬಲ ಬೆಲೆ ನೀಡಲು ವಿಫಲವಾಗಿದೆ. ಬೇಡಿಕೆ ಗಳನ್ನು ಪಡೆಯಲು ಹೋರಾಟದ ಹಾದಿ ಅನಿವಾರ್ಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮೈಸೂರು ಘಟಕದ ಪ್ರಧಾನ ಕಾರ್ಯದÀರ್ಶಿ ಹೊಸಕೋಟೆ ಬಸವರಾಜು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ಶ್ರೀಮಂಗಲ ವಿ.ಎಸ್.ಎಸ್.ಎನ್. ಸಭಾಂಗಣದಲ್ಲಿ ರೈತ ಸಂಘಕ್ಕೆ ಸದಸ್ಯತ್ವ ಅಭಿಯಾನ ಉದ್ಘಾಟಿಸಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ.

ರೈತರು ಬೆಳೆದ ಬೆಳೆÀಗೆ ಬೆಂಬಲ ಬೆಲೆ ನೀಡುವಂತೆ ಹೋರಾಟಗಳು ಮಾಡಿದರು ಸರ್ಕಾರಗಳು ದ್ವಿಮುಖ ನೀತಿ ಅನುಸರಿಸಿಕೊಂಡು ಬಂದಿದೆ. ರೈತರು ಸಂಘಟಿತರಾಗಿ ಹೋರಾಟ ಮಾಡಿದಲ್ಲಿ ರೈತರ ಬೇಡಿಕೆಗಳಿಗೆ ಮನ್ನಣೆ ದೊರಕುವಂತಾಗುತ್ತದೆ ಎಂದು ಹೇಳಿದರು.

ರೈತ ಸಂಘ ಪ್ರಧಾನ ಕಾರ್ಯದರ್ಶಿ ಸುಜಯ್ ಬೋಪಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವನ್ಯಜೀವಿ ಹಾವಳಿ, ಅಕಾಲಿಕ ಮಳೆಯಿಂದ ಕಂಗೆಟ್ಟಿದ್ದಾರೆ. ರೈತ ಸಂಘದ ಬಲವರ್ಧನೆಗಾಗಿ ಕೊಡಗಿನ ಎಲ್ಲಾ ಭಾಗಗಳಲ್ಲಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾಧ್ಯಕ್ಷÀ ಕಾಡ್ಯಮಾಡ ಮನು ಮಾತನಾಡಿ, ವನ್ಯಜೀವಿ ದಾಳಿ, ಪ್ರಾಕೃತಿಕ ವಿಕೋಪದಿಂದ ಕೃಷಿ ಭೂಮಿ ಕಳೆದುಕೊಂಡ ರೈತನಿಗೆ ಸರಕಾರ ಅಲ್ಪಮೊತ್ತದ ಪರಿಹಾರ ನೀಡುತ್ತಿರುವುದು ಸರಿಯಾದ ಕ್ರಮವಲ್ಲ.

ಬೆಳೆಹಾನಿ ಹೊಂದಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸುವತ್ತ ರಾಜ್ಯ ಸರ್ಕಾರವು ಚಿಂತನೆ ಮಾಡಬೇಕು.

ಜಿಲ್ಲೆಯಲ್ಲಿ ಕಾರ್ಮಿಕರ ಕೊರತೆಯಿಂದ ಹೊರ ರಾಜ್ಯಗಳ ಕಾರ್ಮಿಕರನ್ನು ಆಶ್ರಯಿಸುವ ಪರಿಸ್ಥಿತಿ ಬಂದಿದೆ. ಸಂಕಷ್ಟದಲ್ಲಿರುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದೆ.

ಕಾರ್ಯಕ್ರಮದಲ್ಲಿ ಶ್ರೀಮಂಗಲ, ಬಿ. ಶೆಟ್ಟಿಗೇರಿ ಮತ್ತು ಕುಂದಾ ಗ್ರಾಮ ವ್ಯಾಪ್ತಿಯಲ್ಲಿರುವ ಸುಮಾರು ೧೦೦ಕ್ಕೂ ಅಧಿಕ ಮಂದಿ ರೈತರು ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯತ್ವ ಹೊಂದಿದ್ದರು. ಹೊಸ ಸದಸ್ಯರಿಗೆ ರೈತ ಸಂಘದ ಪದಾಧಿಕಾರಿಗಳು ಶಾಲು ಹೊದಿಸಿ ಬರಮಾಡಿಕೊಂಡರು.

ಕಾರ್ಯಕ್ರಮದಲ್ಲಿ ವೀರಾಜಪೇಟೆ ತಾಲೂಕು ಅಧ್ಯಕ್ಷ ಬಾಚಮಾಡ ರವಿ ಕುಮಾರ್, ಪ್ರಮುಖರಾದ ಆಲೆೆಮಾಡ ಮಂಜುನಾಥ್, ಚಂಗುಲAಡ ಸೂರಜ್, ಚಟ್ಟಂಗಡ ಕಂದಾ ಕಾರ್ಯಪ್ಪ, ರಾಯ್ ಮೇದಪ್ಪ, ಪೊನ್ನಂಪೇಟೆ ವಲಯ ಅಧ್ಯಕ್ಷ ಚೊಟ್ಟೆಕಾಳಪಂಡ ಮನು, ಅಪ್ಪಚಂಗಡ ಮಾದಯ್ಯ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

-ಕೆ.ಕೆ.ಎಸ್.