ಸುಂಟಿಕೊಪ್ಪ, ಆ. ೨೮: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ , ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಕೊಡಗು ಜಿಲ್ಲಾ ಸಮಿತಿ ಆಶ್ರಯದಲ್ಲಿ ಸುಂಟಿಕೊಪ್ಪ ಸರ್ಕಾರಿ ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದ ನಿಸರ್ಗ ಇಕೋ ಕ್ಲಬ್ ವತಿಯಿಂದ ಪರಿಸರ ಸ್ನೇಹಿ ಹಾಗೂ ಅರಿಶಿಣ ಗಣೇಶ : ೨೦೨೧ ರ ಅಂಗವಾಗಿ ಅರಿಶಿಣ ಗಣೇಶೋತ್ಸವ ಕುರಿತು ಜನಜಾಗೃತಿ ಮೂಡಿಸಲಾಯಿತು.
ಅರಿಶಿಣ ಗಣೇಶೋತ್ಸವ ಆಚರಣೆ ಕುರಿತು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ ವತಿಯಿಂದ ಲೆವಿಸ್ಟಾ ಇನ್ ಸ್ಟಂಟ್ ಕಾಫಿ ಕಂಪನಿ ಆಶ್ರಯದಲ್ಲಿ ಹೊರತಂದಿರುವ ಸ್ಟಿಕ್ಕರ್ ಗಳನ್ನು ಬಿಡುಗಡೆಗೊಳಿಸಿದ ಕೊಡಗು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, ಈ ಬಾರಿ ‘ಪರಿಸರ ಸ್ನೇಹಿ ಜತೆಗೆ ಆರೋಗ್ಯ ಸ್ನೇಹಿ’ ರೋಗ ನಿರೋಧಕ ಅರಿಶಿಣದಿಂದ ತಯಾರಿಸಿದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮೂಲಕ ಹಸಿರು ಗಣೇಶೋತ್ಸವ ಆಚರಿಸಬೇಕಿದೆ ಎಂದರು.
ಅರಿಶಿಣ ಗಣೇಶೋತ್ಸವ ಜಾಗೃತಿ ಕುರಿತು ಮಾಹಿತಿ ನೀಡಿದ ಶಿಕ್ಷಣ ಇಲಾಖೆಯ ರಾಷ್ಟಿçÃಯ ಹಸಿರು ಪಡೆಯ ಕೊಡಗು ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಕೂಡು ಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲೇ, ಗೌರಿ ಗಣೇಶ ಹಬ್ಬವು ಸಮೀಪಿಸುತ್ತಿದೆ. ಈ ಬಾರಿ ರೋಗ ನಿರೋಧಕ ಶಕ್ತಿ ಇರುವ ಅರಿಶಿಣದಿಂದ ಗಣೇಶನನ್ನು ಮನೆಯಲ್ಲೇ ತಯಾರಿಸಿ, ಪೂಜಿಸಿದ ನಂತರ ಮನೆಯಲ್ಲೇ ವಿಸರ್ಜಿಸಿ ಪರಿಸರ ಮಾಲಿನ್ಯ ನಿಯಂತ್ರಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.
ಉಪಪ್ರಾಂಶುಪಾಲ ಬಾಲಕೃಷ್ಣ, ಇಕೋ ಕ್ಲಬ್‌ನ ಉಸ್ತುವಾರಿ ಶಿಕ್ಷಕಿ ಹೆಚ್.ಎನ್. ಜಯಶ್ರೀ, ಪರಿಸರ ಪ್ರೇರಕ ಎಸ್.ಸಿ. ಗೋವಿಂದರಾಜ್ ಕೂಡಿಗೆ, ಶಿಕ್ಷಕರು ಇದ್ದರು. ಪರಿಸರ ಹಾಗೂ ಆರೋಗ್ಯ ಸ್ನೇಹಿ ಅರಿಶಿಣ ಗಣೇಶೋತ್ಸವ ಕುರಿತು ಅಭಿಯಾನದ ಸಂಚಾಲಕ ಟಿ.ಜಿ. ಪ್ರೇಮಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು.